ತಬೀಬ್​ಲ್ಯಾಂಡ್​ನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

tabibland
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಿರ್ಲಕ್ಷ್ಯ್ಕೊಳಪಟ್ಟಿತ್ತು. ಈಗ ಕಾಂಗ್ರೆಸ್ ಸರ್ಕಾರ ಮತ್ತೆ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದೆ ಎಂದು ಸ್ಲಂ ಬೋರ್ಡ್ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹುಬ್ಬಳ್ಳಿ ತಬೀಬ್​ಲ್ಯಾಂಡ್ ಬಡಾವಣೆಯಲ್ಲಿ ಮಂಗಳವಾರ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋನಿಯಾಗಾಂಧಿ ನಗರ, ಎಸ್.ಎಂ.ಕೃಷ್ಣ ನಗರ, ಶಿವಶಂಕರ ಕಾಲನಿ ಸೇರಿ 5 ಇಂದಿರಾ ಕ್ಯಾಂಟಿನ್ ಸ್ಥಾಪಿಸಲಾಗಿದ್ದು, ಇನ್ನು ಅನೇಕ ಬಡಾವಣೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಇಂದಿರಾ ಕ್ಯಾಂಟೀನ್​ಗಳು ಕಡಿಮೆ ದರದಲ್ಲಿ ಬಡವರ, ಕೂಲಿ ಕಾರ್ವಿುಕರ, ಆಟೋ ಚಾಲಕರ ಹಸಿವು ನೀಗಿಸುತ್ತಿದೆ. ಗುಣಮಟ್ಟದ ಆಹಾರ ಕಡಿಮೆ ದರದಲ್ಲಿ ದೊರಕುತ್ತದೆ. ಇವತ್ತು ನಮ್ಮ ದೇಶ ಅಭಿವೃದ್ಧಿ ಕಾಣುತ್ತಿದೆ ಎಂದರೆ ಅದಕ್ಕೆ ಮೂಲ ಕಾರಣ ಇಂದಿರಾಗಾಂಧಿ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಪಾಲಿಕೆ ಆಯುಕ್ತ ಡಾ. ರುದ್ರೇಶ ಗಾಳಿ, ಅಧೀಕ್ಷಕ ಇಂಜಿನಿಯರ್ ಆರ್. ವಿಜಯಕುಮಾರ್, ವಲಯ ಆಯುಕ್ತರಾದ ಮಲ್ಲಿಕಾರ್ಜುನ ಬಿ.ಎಂ., ಮುಖಂಡರಾದ ಆಸೀಫ್ ಬಳ್ಳಾರಿ, ಶರೀಫ್ ಅದ್ವಾನಿ, ಅಬ್ಬಾಸ ಕುಮಟಾಕರ್, ಶ್ರೀನಿವಾಸ ಬೆಳದಡಿ, ಆರೀಫ್ ದೊಡ್ಡಮನಿ, ಜಾಫರ್ ಶಾಬ್ದಿ, ಅಕ್ಬರ್ ಅಂಗಡಿ ಅನೇಕರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net