ಇಂದಿರಾ ಕ್ಯಾಂಟೀನ್​ ರಾಷ್ಟ್ರಕ್ಕೆ ಮಾದರಿ

12 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಜನರಿಗೆ ಇಂದಿರಾ ಕ್ಯಾಂಟೀನ್​ ಮೂಲಕ 5 ರೂ.ಗೆ ಊಟ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಹೇಳಿದರು.
ನಗರದ ಮಿನಿ ವಿಧಾನಸೌಧ ಆವರಣದಲ್ಲಿನ ಇಂದಿರಾ ಕ್ಯಾಂಟೀನ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿರಾ ಕ್ಯಾಂಟೀನ್​ ರಾಜ್ಯ ಸರ್ಕಾರದ ಮಹತ್ವದ ಕೊಡುಗೆ. ಜಿಲ್ಲೆಯ ಅವಳಿನಗರದಲ್ಲಿ 9 ಇಂದಿರಾ ಕ್ಯಾಂಟೀನ್​ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ಇಂದಿರಾ ಕ್ಯಾಂಟೀನ್​ದಿಂದ ನಿತ್ಯ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ. ಅದರಂತೆ ಇಂದಿರಾ ಕ್ಯಾಂಟೀನ್​ಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಬಳಿಕ ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಚಿವ ಸಂತೋಷ ಲಾಡ್​ ಸೇರಿ ಇತರ ಅಧಿಕಾರಿಗಳು ಉಪಾಹಾರ ಸೇವಿಸಿದರು. ಶಾಸಕ ಎನ್​.ಎಚ್​. ಕೋನರಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್​ ದೇಸಾಯಿ, ಪಾಲಿಕೆ ಸದಸ್ಯ ಡಾ.ಮಯೂರ ಮೋರೆ, ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net