

ಬ್ಯಾಡಗಿ: ಇಂದಿರಾ ಕ್ಯಾಂಟೀನ್ ಬಡವರಿಗೆ ಕಡಿಮೆ ದರದಲ್ಲಿ ಊಟ-ಉಪಹಾರ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಪಟ್ಟಣದ ಕಾಕೋಳ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ತಾಲೂಕು ಹಾಗೂ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೊಳಿಸಿದ್ದರು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದ್ದು, ಬ್ಯಾಡಗಿಯಲ್ಲಿ ಜಾಗದ ಸಮಸ್ಯೆಯಿಂದ ನನೆಗುದಿಗೆ ಬಿದ್ದಿತ್ತು. ಈಗ ಹೊಸ ಕಟ್ಟಡ ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದೇವೆ ಎಂದರು.
ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ್ರ ಪಾಟೀಲ, ತಹಸೀಲ್ದಾರ್ ಫಿರೋಜ್‌ಷಾ ಸೋಮನಕಟ್ಟಿ, ತಾಪಂ ಇಒ ಕೆ.ಎಂ. ಮಲ್ಲಿಕಾರ್ಜುನ, ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ, ಮುನ್ಾಅಲಿ ಎರೆಸೀಮೆ, ಗಿರೀಶ ಇಂಡಿಮಠ, ದುರ್ಗೇಶ ಗೋಣೆಮ್ಮನವರ, ಶಂಭನಗೌಡ್ರ ಪಾಟೀಲ, ದಾನಪ್ಪ ಚೂರಿ, ಡಿ.ಎಚ್. ಬುಡ್ಡನಗೌಡ್ರ, ರಮೇಶ ಸುತ್ತಕೋಟಿ, ಮಾರುತಿ ಅಚ್ಚಿಗೇರಿ, ಬೀರಪ್ಪ ಬಣಕಾರ, ಫೀರಾಂಬಿ ದೇಸೂರು, ಸುಶೀಲಾ ಲಮಾಣಿ, ಎ.ಎಸ್. ಸೌದಾಗರ ಇತರರಿದ್ದರು.