

ನರೇಗಲ್ಲ: ಬಡವರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೊಳಿಸಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಅಬ್ಬಿಗೇರಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಮಂಗಳವಾರ ಆಹಾರ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಕೆಲಸದ ನಿಮಿತ್ಯ ಪಟ್ಟಣದ ಆಗಮಿಸುವ ನಾಗರಿಕರಿಗೆ ಸುಲಭದ ಬೆಲೆಯಲ್ಲಿ ಊಟ-ಉಪಹಾರ ದೊರಕಲಿ ಎನ್ನುವ ದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗಿದೆ ಎಂದರು.
ನಗರೋತ್ಥಾನ ಯೋಜನೆಯಡಿ 11.24 ಲಕ್ಷ ರೂ. ವೆಚ್ಚದಲ್ಲಿ ಅಂಗವಿಕಲರಿಗೆ 10 ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಪ.ಪಂ. ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಸ್ಥಾಯಿ ಕಮಿಟಿ ಚೇರ್ಮನ್ ಮುತ್ತಪ್ಪ ನೂಲ್ಕಿ, ಈರಪ್ಪ ಜೋಗಿ, ಮಲಿಕ್‌ಸಾಬ್ ರೋಣದ. ದಾವುದಲಿ ಕುದರಿ, ಅಕ್ಷಯ ಪಾಟೀಲ, ಬಸನಗೌಡ, ಶರಣಪ್ಪ ಓಣಿ, ಡಾ. ಕೆ.ಬಿ. ಧನ್ನೂರ, ಶಿವನಗೌಡ ಪಾಟೀಲ, ಶೇಖಪ್ಪ ಕೆಂಗಾರ, ಕಳಕನಗೌಡ ಪೋಲಿಸ ಪಾಟೀಲ, ಸಕ್ರಪ್ಪ ಹಡಪದ, ನಿಂಗನಗೌಡ ಲಕ್ಕನಗೌಡ್ರ, ಮಹಮ್ಮದ ಹೊಸಮನಿ, ಮೈಲಾರಪ್ಪ ಗೋಡಿ, ರಾಧಾ ಸಾತನೂರ, ಅಲ್ಲಾಭಕ್ಷಿ ನದಾಫ್, ಮೈಲಾರಪ್ಪ ಚಳ್ಳಮರದ, ಪ.ಪಂ. ಮುಖ್ಯಾಧಿಕಾರಿ ಮಹೇಶ ನಿಡಶೇಶಿ ಇತರರಿದ್ದರು.