

ವಿಜಯಪುರ : ದೇಶದ ಮೊದಲ ಮಹಿಳಾ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಕೊಡುಗೆ ಅಪಾರ ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಽ ಅವರ ೩೮ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿರಾ ಗಾಂಧಿ ಅವರು ಗರೀಬಿ ಹಠಾವೋ ಘೋಷಣೆ ಮೂಲಕ ಸಮಾಜದ ಬಡವರಿಗೆ ಅದರಲ್ಲೂ ದುರ್ಬಲ ವರ್ಗದವರಿಗೆ ತಿಂಗಳ ಮಾಸಾಶನ ಮತ್ತು ಜಮೀನು ಇಲ್ಲದವರಿಗೆ ಜಮೀನು ಮಂಜೂರು ಮಾಡುವುದರೊಂದಿಗೆ ಬ್ಯಾಂಕ್ ರಾಷ್ಟ್ರೀಕರಣದಂತಹ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರು. ಆ ಮೂಲಕ ಭಾರತದ ಉಕ್ಕಿನ ಮಹಿಳೆ ಎಂದು ಖ್ಯಾತಿ ಪಡೆದವರು. ಅವರ ಮಾರ್ಗದಲ್ಲಿ ಇಂದು ನಾವೆಲ್ಲರೂ ನಡೆಯಬೇಕಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಸದಸ್ಯೆ ಕಾಂತಾ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ, ಜಿಲ್ಲಾ ಕಾಂಗ್ರೆಸ್ ಕಿಸಾನ ಘಟಕದ ಅಧ್ಯಕ್ಷ ಬಾಪುಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ನಿಂಗಪ್ಪ ಸಂಗಾಪುರ, ರಾಕೇಶ ಕಲ್ಲೂರ, ಚನ್ನಬಸಪ್ಪ ನಂದರಗಿ, ಮಹಮ್ಮದ ಹನೀಫ್ ಮಕಾನದಾರ, ಡಿ.ಎಲ್. ಚವ್ಹಾಣ, ರಮೇಶ ದಳವಾಯಿ, ದಾನು ಬಾಳಿ ಮುಂತಾದವರು ಉಪಸ್ಥಿತರಿದ್ದರು.