ಜನರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಇಂದಿರಾ

19-11-Shiva-5
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಸವರಾಜ ರೆಡ್ಡಿ, ಮುಖಂಡರಾದ ಕೆ.ಶಾಂತಪ್ಪ, ಮಹ್ಮದ್ ಶಾಲಂ, ಜಯಣ್ಣ, ಜಿ.ಶಿವಮೂರ್ತಿ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ ಇದ್ದರು.
Published on

ರಾಯಚೂರು: ದೇಶಕ್ಕೆ ಸಮರ್ಥ ನಾಯಕತ್ವ ಕೊಟ್ಟಿದ್ದ ಮಾಜಿ ಪ್ರಧಾನಿ ಇಂದಿರಾಗಾಂ ತಮ್ಮ ಜನಪರ ಯೋಜನೆಗಳಿಂದಾಗಿ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ದೇಶದ ಮೂಲೆಮೂಲೆಯಲ್ಲಿ ಇರಲು ಇಂದಿರಾಗಾಂ ಹೆಸರಿನಿಂದ ಎಂದರು.
ತಮ್ಮ ಕೊನೆ ಉಸಿರಿನವರೆಗೆ ಪಕ್ಷ ಹಾಗೂ ದೇಶಲ್ಲಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡು ತಮ್ಮ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ಬ್ಯಾಂಕ್ ರಾಷ್ಟ್ರೀಕರಣ, ಗರೀಬಿ ಹಠಾವೋ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಶೋಷಿತ ಜನಾಂಗದ ಧ್ವನಿಯಾಗಿ ಕೆಲಸ ಮಾಡಿದ್ದರು ಎಂದು ಹೇಳಿದರು.
ಪಕ್ಷದ ಹಿರಿಯ ಮುಖಂಡ ಪಾರಸಮಲ್ ಸುಖಾಣಿ ಮಾತನಾಡಿ, ಇಂದಿರಾಗಾಂ ಜಾರಿಗೆ ತಂದ ವೃದ್ಧಾಪ್ಯ ವೇತನ, ಬಡವರಿಗಾಗಿ ಸೂರು, ಜೀತಮುಕ್ತಿ ಕಾನೂನು ಸೇರಿದಂತೆ ಹಲವಾರು ಯೋಜನೆಗಳು ಇಂದಿಗೂ ಜನರ ಮನದಲ್ಲಿದ್ದಾವೆ. ಅಲಿಪ್ತ ರಾಷ್ಟ್ರಗಳನ್ನು ಒಂದೆಡೆ ಸೇರಿದ ಕೀರ್ತಿ ಇಂದಿರಾಗಾಂಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಸವರಾಜ ರೆಡ್ಡಿ, ಮುಖಂಡರಾದ ಕೆ.ಶಾಂತಪ್ಪ, ರವಿ ಬೋಸರಾಜು, ಮಹ್ಮದ್ ಶಾಲಂ, ಜಯಣ್ಣ, ಜಿ.ಶಿವಮೂರ್ತಿ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ರವಿ ಪಾಟೀಲ್, ನಾಗವೇಣಿ ಪಾಟೀಲ್, ಶಶಿಕಲಾ ಭೀಮರಾಯ, ನವನೀತಾ ಆದೋನಿ, ಸುರೇಖಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net