ಒತ್ತುವರಿ ತೆರವಿಗೆ ನಿರ್ದಾಕ್ಷೃಣ್ಯ ಕ್ರಮ

sri-3 (7)
Published on

ಶೃಂಗೇರಿ: ಚಿಕ್ಕಮಗಳೂರಿನ ಹಿಂದಿನ ಜಿಲ್ಲಾಧಿಕಾರಿ ಗೋಪಾಲಕಷ್ಣಗೌಡ ಅವರು ಸುಮಾರು 1,45,000 ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸಿದ್ದರಿಂದ ಪ್ರಸ್ತುತ ಮಲೆನಾಡಿನ ರೈತರು ಹಾಗೂ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ತಾಪಂ ಸಭಾಂಗಣದಲ್ಲಿ ನಡೆದ ಶಾಸಕರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಾಲೂಕಿನ ಕೆಲವು ಪ್ರದೇಶಗಳಲ್ಲಿ ಸರ್ಕಾರ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವು ಮಾಡುವಲ್ಲಿ ಅಧಿಕಾರಿಗಳು ನಿರ್ದ್ಯಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಯಾವುದೇ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸಿದ್ದರೆ ಮಾತ್ರ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದರು.

ಅರಣ್ಯ ಇಲಾಖೆ ಕಾಯ್ದೆಗಳಿಂದ ರೈತರು ಸೋತು ಸುಣ್ಣರಾಗಿದ್ದಾರೆ. ರೈತರು ಹಲವಾರು ವರ್ಷಗಳ ಹಿಂದೆ ನೀಡಿದ ಅರ್ಜಿ ನಮೂನೆ 50-53ರ ಕುರಿತು ಕೂಡಲೇ ಸಂಬಂಧಪಟ್ಟ ಇಲಾಖೆ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡುವತ್ತ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ನಾಮನಿರ್ದೇಶಿತ ಸದಸ್ಯರಾದ ಪುಟ್ಟಪ್ಪ ಹೆಗಡೆ, ದಿನೇಶ್ ಹೆಗಡೆ, ಕೆ.ಎಸ್.ರಮೇಶ್ ಸಭಾಧ್ಯಕ್ಷ ಟಿ.ಡಿ.ರಾಜೇಗೌಡರಲ್ಲಿ ಮನವಿ ಮಾಡಿದರು.

ತಹಸೀಲ್ದಾರ್ ಅನುಪ್ ಸಂಜೋಗ್, ತಾಪಂ ಇಒ ಸುದೀಪ್, ನಾಮ ನಿರ್ದೇಶಿತ ಸದಸ್ಯರಾದ ನಾರಾಯಣ್,ಪುಟ್ಟಪ್ಪ ಹೆಗಡೆ, ಮೇಗಳಬೈಲು ಚಂದ್ರಶೇಖರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net