ಆರೋಗ್ಯವಂತ ಉಡುಪಿ ಜಿಲ್ಲೆಗೆ ಪಣ: ಡಿಎಚ್​ಒ ಡಾ. ನಾಗಭೂಷಣ

udp-indra
Published on

ಉಡುಪಿ: ಮಕ್ಕಳು, ಗರ್ಭಿಣಿಯರು ಹಾಗೂ ತಾಯಂದಿರು ಲಸಿಕೆ ಪಡೆಯುವ ಮೂಲಕ ಉಡುಪಿಯನ್ನು ಆರೋಗ್ಯವಂತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು ಎಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್​.ನಾಗಭೂಷಣ ಉಡುಪ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗರ್ಭಿಣಿಯರಿಗೆ ಹಾಗೂ -5 ವರ್ಷದೊಳಗಿನ ಮಕ್ಕಳಿಗೆ ಪರಿಣಾಮಕಾರಿ ಮಿಷನ್​ ಇಂದ್ರಧನುಷ್​&5.0 ಲಸಿಕಾ ಅಭಿಯಾನದ ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಅ. 9ರಿಂದ 14ರ ವರೆಗೆ ಜಿಲ್ಲೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಮೊದಲಿನ ಎರಡು ಸುತ್ತುಗಳಲ್ಲಿ ಲಸಿಕೆ ವಂಚಿತ ಮಕ್ಕಳು ದಡಾರ, ರುಬೆಲ್ಲಾ ಇನ್ನಿತರ ನಿಗದಿತ ಲಸಿಕೆ ಪಡೆದು ಮಾರಕ ಕಾಯಿಲೆಯಿಂದ ರಕ್ಷಣೆ ಪಡೆಯಬೇಕು ಎಂದರು.

ಡಿಡಿಪಿಐ ಗಣಪತಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ್​ರಾವ್​ ಕೆ., ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ವೇಣುಗೋಪಾಲ್​, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಡಿಪಿಸಿ-&ಆರ್​ಸಿಎಚ್​, ಎಂ/ಇ ವ್ಯವಸ್ಥಾಪಕರು, ವಿಸಿಸಿಎಂ, ಐಎಫ್​ವಿ ಮತ್ತು ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಭಾರ ಆರ್​ಸಿಎಚ್​ ಅಧಿಕಾರಿ ಡಾ.ಪ್ರಶಾಂತ್​ ಭಟ್​ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net