ಚಳ್ಳಕೆರೆ ತಾಲೂಕಿನಲ್ಲಿ 7ರಿಂದ ಇಂದ್ರಧನುಷ್ ಲಸಿಕಾ ಅಭಿಯಾನ

Indradhanush, Vaccination, Campaign,
Published on

ಚಳ್ಳಕೆರೆ: ತಾಲೂಕಿನಲ್ಲಿ ಆ.7ರಿಂದ ಆರು ದಿನಗಳ ಕಾಲ ಇಂದ್ರಧನುಷ್ ಲಸಿಕಾ ಅಭಿಯಾನ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಲ್. ಕಾಶಿ ತಿಳಿಸಿದ್ದಾರೆ.

ಗರ್ಭಿಣಿಯರು ಮತ್ತು 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಇದಾಗಿದೆ.

ಗ್ರಾಮಾಂತರ ಭಾಗದಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಕ್ಕಳ ಜನನ ಮತ್ತು ಬೆಳವಣಿಗೆ ಆರೋಗ್ಯವಾಗಿರಬೇಕಿದೆ.

ಚಿಕ್ಕ ಮಕ್ಕಳಲ್ಲಿ ಯಾವುದೇ ರೋಗ ಬಾಧೆಗಳು ಕಾಡದಂತೆ ನೀಡಲಿರುವ ಲಸಿಕೆಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳುವ ಜಾಗೃತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net