

ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ರ್ನಿಲಕ್ಷ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿಯಿಂದ ಮಣಿಪಾಲ್ಗೆ ಹೋಗುವ ರಸ್ತೆ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆ ಉಕ್ಕಿನ ಸೇತುವೆ ನಿಮಾರ್ಣ ಮಾಡಬೇಕೆಂದು ಸೂಚನೆ ನೀಡಿದ ಹಿನ್ನಲೆಯಲ್ಲಿ 2018ರಲ್ಲಿ ಉಕ್ಕಿನ ಸೇತುವೆ ನಿಮಾರ್ಣ ಕಾಮಗಾರಿ ಪ್ರಕ್ರಿಯೆ ಪ್ರಾರಂಭವಾಗಿದೆ. 5 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೇ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ, ಹೀಗಾಗಿ ಪ್ರಮುಖ ಗುತ್ತಿಗೆದಾರ ಹಾಗೂ ಉಪ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು.
ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಉಕ್ಕಿನ ಸೇತುವೆಯ ನಿಮಾರ್ಣದ ವೆಲ್ಡಿಂಗ್ ಕೆಲಸವನ್ನು ನಿರ್ವಹಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು. ಉಕ್ಕಿನ ಮೇಲ್ಸೇತುವೆಯ ಗರ್ಡಲ್ಸ್ ಹಳಿಯ ಮೇಲ್ಭಾಗದಲ್ಲಿ ಇರಿಸಲು ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲಕೃಷ್ಣ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಉಪಸ್ಥಿತರಿದ್ದರು.
ಕಾಮಗಾರಿಯ ವಿಳಂಬದಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಬಹಳಷ್ಟು ಸಮಸ್ಯೆಯಾಗುತ್ತಿದೆ. ಜೊತೆಗೆ ಅನೇಕ ರಸ್ತೆ ಅಪಘಾತಗಳು ಸಹ ಸಂಭವಿಸಿವೆ. ಅಪಘಾತದ ಪ್ರಕರಣಗಳಲ್ಲಿ ಗುತ್ತಿಗೆದಾರರು, ಅಭಿಯಂತರರ ಹೆಸರನ್ನು ಸೇರಿಸಿ, ರ್ನಿಲಕ್ಷ ಪ್ರಕರಣವನ್ನು ದಾಖಲಿಸಲಾಗುವುದು. ಡಾ. ಅರುಣ್ ಕೆ., sp