

ಮಂಡ್ಯ: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಡಾ.ಎನ್.ಎಸ್.ಇಂದ್ರೇಶ್ ಮರು ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದ ಅವರು ಮುಂದಿನ ಮೂರು ವರ್ಷ ಅವಧಿಗೂ ಕಾರ್ಯನಿರ್ವಹಿಸಲಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಚುನಾವಣಾಧಿಕಾರಿ ಫಣೀಶ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿ, ಪಕ್ಷದ ಕೇಂದ್ರ ಮತ್ತು ರಾಜ್ಯ ನಾಯಕರ ನಿರ್ದೇಶನದಂತೆ ಮತ್ತೊಮ್ಮೆ ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ. ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡಲಾಗುವುದು. ಅಂತೆಯೇ ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು ಎಂದರು.
ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ರಾಜ್ಯಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ನಗರಾಧ್ಯಕ್ಷ ವಸಂತ್‌ಕುಮಾರ್, ಶ್ರೀಧರ್, ಅಶೋಕ್, ಸಿ.ಟಿ.ಮಂಜುನಾಥ್, ಪ್ರಸನ್ನ, ವಿವೇಕ್, ನಾಗಾನಂದ ಇತರರಿದ್ದರು.