

ಮಂಡ್ಯ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಎಲ್ಲ ದೃಷ್ಠಿಕೋನದಲ್ಲಿಯೂ ವಿಭಿನ್ನತೆ ತೋರುವ ಮೂಲಕ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನೂತನ ಜಿಲ್ಲಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಘದ ಒಮ್ಮತದ ಮನೋಭಾವನೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.
ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಮಾತನಾಡಿ, ನೂತನ ಅಧ್ಯಕ್ಷರು ಹಿರಿಯ ಹಾಗೂ ಕಿರಿಯ ಪತ್ರಕರ್ತರನ್ನು ವಿಶ್ವಾಸಕ್ಕೆ ಪಡೆದು ಸಂಘವನ್ನು ಮುನ್ನಡೆಸಬೇಕು. ಸಂಘದ ಅಭಿವೃದ್ಧಿಗೆ ತಮಗೆ ದೊರೆತ ಅವಧಿಯಲ್ಲಿ ಸಾಧ್ಯವಾದಷ್ಟು ಕೆಲಸ ಮಾಡಿ, ತಮ್ಮ ಕೆಲಸಗಳಿಗೆ ಪತ್ರಕರ್ತರಲ್ಲಿ ಯಾವುದೇ ರೀತಿ ಅಸಮಾಧಾನ ಇರದಂತೆ ಮುನ್ನಡೆಸುವಂತಾಗಲಿ ಎಂದು ಸಲಹೆ ನೀಡಿದರು.
ನೂತನ ಅಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ನಿಕಟಪೂರ್ವ ಅಧ್ಯಕ್ಷ ಬಿ.ಪಿ.ಪ್ರಕಾಶ್, ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಆನಂದ, ಉಪಾಧ್ಯಕ್ಷ ರವಿ ಸಾವಂದಿಪುರ, ರಾಜ್ಯ ಸಮಿತಿ ಸದಸ್ಯ ಮಂಜುನಾಥ್ ಇತರರಿದ್ದರು.