ಕಲಬುರಗಿ ಬಳ್ಳಾರಿಯಲ್ಲಿ ಕೈಗಾರಿಕಾ ಟೌನ್ ಶಿಪ್ , ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ : ಸಿಎಂ ಘೋಷಣೆ

IMG-20230917-WA0012
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ
ರಾಜಧಾನಿ ಹೊರಗೆ ಕೈಗಾರಿಕ ಬರಲು ಮತ್ತು ಮೂಲ ಸೌಕರ್ಯ ಕಲ್ಪಿಸಲು ಕೈಗಾರಿಕಾ ಅಭಿವೃದ್ಧಿ ಯೋಜನೆ ಅಡಿ ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಕೈಗಾರಿಕಾ ಟೌನ್ ಶಿಪ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ನಗರದ ಪೊಲೀಸ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕನ್ನು ಉದ್ದೇಶಿಸಿ ಮಾತನಾಡಿ, ಏಮ್ಸ್ ಮಾದರಿ ಆಸ್ಪತ್ರೆಯನ್ನು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಕೇಂದ್ರಕ್ಕೆ ಪತ್ರ ಬರೆದಿದ್ದು, ಅನುಪಾಲನೆ ಮಾಡಲಾಗುತ್ತಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಅನುಷ್ಠಾನ ಮಾಡಲಾಗಿದೆ. ಇನ್ನೂ ಯುವ ನಿಧಿ ಯೋಜನೆಯನ್ನು ಈ ವರ್ಷದ ಕೊನೆಯಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, .ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಬಿ.ಆರ್.ಪಾಟೀಲ,ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಎಂ.ಎಲ್.ಸಿ‌ಗಳಾದ ಶಶೀಲ‌ ನಮೋಶಿ, ತಿಪ್ಪಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ವಿಶಾಕ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net