ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

New Project (7)
Published on

ಬೆಳ್ತಂಗಡಿ: ನವದೆಹಲಿ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ 2025 ಜುಲೈ ತಿಂಗಳಿನಲ್ಲಿ ನಡೆಸಿದ 2024-25ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ 47 ವಿದ್ಯಾರ್ಥಿನಿಯರು ಹಾಜರಾಗಿದ್ದು, ಅದರಲ್ಲಿ 32 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಹಾಗೂ 15 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕೋಪಾ ವೃತ್ತಿಯ ಅಶೂರಾ - 549 ಅಂಕ ಪಡೆದು ಪ್ರಥಮ, ಸೌಜನ್ಯಾ 537 ಅಂಕ ಪಡೆದು ದ್ವಿತೀಯ, ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯಲ್ಲಿ ರಾಜಶ್ರೀ - 551 ಅಂಕ ಪಡೆದು ಪ್ರಥಮ, ಸೌರಭಾ - 538 ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net