

ಹುಬ್ಬಳ್ಳಿ : ಜಿಲ್ಲೆಯಲ್ಲಿ ಕೈಗಾರೀಕರಣ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು. ಇದರಿಂದ ಕೈಗಾರಿಕೆಗಳ ಜತೆಗೆ ನಗರಗಳು ಅಭಿವೃದ್ಧಿ ಹೊಂದಲಿವೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.
ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕ ಪ್ರದೇಶಗಳ ಅಭಿವೃದ್ಧಿ ಮಂಡಳಿ ( ಕೆಐಎಡಿಬಿ) ಮತ್ತು ಕೈಗಾರಕೆ ಇಲಾಖೆಯ ಅಧಿಕಾರಿಗಳೊಂದಿಗೆ ಗುರುವಾರದಂದು ಸಭೆ ನಡೆಸಿದ ಶೆಟ್ಟರ್, ಎಫ್.ಎಂ.ಜಿ.ಸಿ. ಕ್ಲಸ್ಟರ್ ಹಾಗೂ ಇತರ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯ ಇರುವ ಖಾಲಿ ಪ್ರದೇಶಗಳನ್ನು ಕೈಗಾರಿಕೋದ್ಯಮಿಗಳಿಗೆ ಒದಗಿಸಬೇಕು. ಆ ಮೂಲಕ ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಇರುವ ಸವಲತ್ತು ಮತ್ತು ಅನುಕೂಲಗಳನ್ನು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಾದ ಬಿ.ಟಿ. ಪಾಟೀಲ, ನವೀನ ಹುಲ್ಲೂರ, ಉಪ ಅಭಿವೃದ್ಧಿ ಅಧಿಕಾರಿ ಗೋವಿಂದ ಭಜಂತ್ರಿ, ಇಂಜಿನಿಯರ್ ಎಸ್.ಎಂ. ಕಣಬೂರ ಹಾಗೂ ಇತರರು ಉಪಸ್ಥಿತರಿದ್ದರು.