ಮುದ್ರಾಡಿ ಪ್ರೌಢಶಾಲೆಯಲ್ಲಿ ಸಾಂಕ್ರಾಮಿಕ ರೋಗ ಮಾಹಿತಿ ಕಾರ್ಯಕ್ರಮ

mahiti karyakrama
ಸಾಂಕ್ರಾಮಿಕ ರೋಗಗಳ ಮಾಹಿತಿ ಕಾರ್ಯಕ್ರಮ ನಡೆಯಿತು.
Published on

ಹೆಬ್ರಿ: ಮಳೆಗಾಲದಲ್ಲಿ ಬಹುತೇಕ ಕಾಯಿಲೆಗಳು ಸೊಳ್ಳೆ ಕಡಿತ ಹಾಗೂ ಕಲುಷಿತ ನೀರು ಸೇವನೆಯಿಂದ ಬರುತ್ತವೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನಿಗಾ ವಹಿಸಿದರೆ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದು. ಕುದಿಸಿ ಆರಿಸಿದ ನೀರನ್ನು ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮುದ್ರಾಡಿ ಸಮುದಾಯ ಆರೋಗ್ಯ ಅಧಿಕಾರಿ ಅನುಷಾ ನಾಯಕ್ ಹೇಳಿದರು.

ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಆರೋಗ್ಯ ಸಂಘದ ಆಶ್ರಯದಲ್ಲಿ ನಡೆದ ಸಾಂಕ್ರಾಮಿಕ ರೋಗಗಳ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಮುಖ್ಯಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆ ಸರಿತಾ, ಆರೋಗ್ಯ ಸಂಘದ ಕಾರ್ಯದರ್ಶಿ ಸಮೀಕ್ಷಾ ಉಪಸ್ಥಿತರಿದ್ದರು. ಆರೋಗ್ಯ ಸಂಘದ ಮಾರ್ಗದರ್ಶಿ ಶಿಕ್ಷಕಿ ಶ್ಯಾಮಲಾ ಕೊಠಾರಿ ನಿರೂಪಿಸಿದರು. ಹಿರಿಯ ಶಿಕ್ಷಕ ಮಹೇಶ ನಾಯ್ಕ ಕೆ. ವಂದಿಸಿದರು. ಶಿಕ್ಷಕರಾದ ಆನಂದ, ರಘುಪತಿ ಹೆಬ್ಬಾರ್, ಚಂದ್ರಕಾಂತಿ ಹೆಗ್ಡೆ, ಮಹೇಶ್ ಎಂ. ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net