ಮಕ್ಕಳಿಗೆ ಪೊಲೀಸರ ಕಾರ್ಯವೈಖರಿ ಮಾಹಿತಿ

14 HANUR 2
????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ಠಾಣೆಗೆ ಆಗಮಿಸಿದ ವಿದ್ಯಾರ್ಥಿಗಳು ಪೊಲೀಸರನ್ನು ಪರಿಚಯ ಮಾಡಿಕೊಂಡರು. ನಿತ್ಯ ನಿರ್ವಹಿಸುವ ಕಾರ್ಯವನ್ನು ತಿಳಿದುಕೊಂಡರು. ಬಂದಿಖಾನೆಯನ್ನು ವೀಕ್ಷಿಸಿದರು. ದೂರು ನೀಡುವುದು ಹಾಗೂ ದಾಖಲಾಗುವ ಪ್ರಕರಣಗಳ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು.

ಇದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಪಟ್ಟಣದ ಗೌತಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಆಗಮಿಸಿದ್ದ ವೇಳೆ ಕಂಡು ಬಂದ ಚಿತ್ರಣ. ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಕ ಮಹೇಶ್ ಅವರೊಂದಿಗೆ ಠಾಣೆಗೆ ಆಗಮಿಸಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಸಿ.ಆನಂದಮೂರ್ತಿ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡು ಠಾಣೆ ಹಾಗೂ ಪೊಲೀಸರ ಕಾರ್ಯ ವಿಧಾನದ ಬಗ್ಗೆ ತಿಳಿಸಿಕೊಟ್ಟರು.

ಇನ್ಸ್‌ಪೆಕ್ಟರ್ ಸಿ.ಆನಂದಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನು ಸುವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತೆರೆದ ಮನೆ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬರೂ ಈ ಬಗ್ಗೆ ತಿಳಿದುಕೊಳ್ಳಬೇಕು. ಪೊಲೀಸರೆಂದರೆ ಭಯಪಡುವುದು ಬೇಡ. ಬಾಲ್ಯ ವಿವಾಹ ಅಪರಾಧವಾಗಿದ್ದು, ಶಿಕ್ಷೆಗೆ ಗುರಿ ಪಡಿಸಲಾಗುತ್ತದೆ. ಆದರೂ ಹನೂರು ಭಾಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದು ವಿಪರ್ಯಾಸ. ಹಾಗಾಗಿ ಇದಕ್ಕೆ ಕಡಿವಾಣ ಹಾಕಬೇಕಿದೆ. ಪ್ರತಿಯೊಬ್ಬರೂ ಎಚ್ಚರ ವಹಿಸುವುದರ ಜತೆಗೆ ಈ ಬಗ್ಗೆ ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು. ಒಂದು ವೇಳೆ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಂಡು ಬಂದಲ್ಲಿ ಪೊಲೀಸರಿಗೆ, ಅಧಿಕಾರಿಗಳಿಗೆ ಮಾಹಿತಿ ತಿಳಿಸಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ತುರ್ತು ಸಹಾಯವಾಣಿ 112 ಇಲ್ಲವೇ 1908ಗೆ ಕರೆ ಮಾಡಿ ತಿಳಿಸಬೇಕು. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ತಿಳಿಸಿದರು.

ಎಎಸ್‌ಐಗಳಾದ ಶಿವರಾಜು, ಶಿವಕುಮಾರ್, ಹೂವಯ್ಯ, ಸಿಬ್ಬಂದಿ ಚೈತ್ರಾ, ಕೀರ್ತಿ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net