ನಾರಿಯರಿಗೆ ಪೊಲೀಸರ ಕಾರ್ಯವೈಖರಿ ಬಗ್ಗೆ ಮಾಹಿತಿ

13-AUG-GPT-1A
Published on

ಗುಂಡ್ಲುಪೇಟೆ: ಪಟ್ಟಣದ ಪೊಲೀಸ್ ಠಾಣೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಮಹಿಳೆಯರು ಭೇಟಿ ನೀಡಿ ಠಾಣೆಯ ಕರ್ತವ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬುಧವಾರ ಬೆಳಗ್ಗೆ ತಾಲೂಕಿನ ಬನ್ನಿತಾಳಪುರ ಗ್ರಾಮದ ಸುಮಾರು 30ಕ್ಕೂ ಹೆಚ್ಚಿನ ಮಹಿಳೆಯರು ಠಾಣೆಗೆ ಆಗಮಿಸಿ ಪೊಲೀಸ್ ಠಾಣೆಯ ದೈನಂದಿನ ಕಾರ್ಯ ನಿರ್ವಹಣೆಯನ್ನು ಕಣ್ಣಾರೆ ಕಂಡರು.

ಕಾನೂನು ಸುವ್ಯವಸ್ಥೆ ವಿಭಾಗದ ಸಬ್‌ಇನ್‌ಸ್ಪೆಕ್ಟರ್ ಸಾಹೇಬಗೌಡ ಅವರಿಂದ ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ, ಸೈಬರ್ ಅಪರಾಧ, ಆನ್ ಲೈನ್ ವಂಚನೆ, ಬಾಲ್ಯವಿವಾಹ, ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾಯ್ದೆಗಳ ಬಗ್ಗೆ ಮಾಹಿತಿ ಪಡೆದರು. ನಂತರ ಕಂಪ್ಯೂಟರ್ ಕೊಠಡಿ ಹಾಗೂ ಲಾಕಪ್ ಸೇರಿದಂತೆ ಠಾಣೆ ಆವರಣದಲ್ಲಿ ಅಡ್ಡಾಡಿ ಪೊಲೀಸ್ ಠಾಣೆಯಲ್ಲಿನ ಕೆಲಸ ಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಸಬ್‌ಇನ್‌ಸ್ಪೆಕ್ಟರ್ ಮಹೇಶ್, ಸಿಬ್ಬಂದಿ ಜಗದೀಶ್, ಬಸವಣ್ಣ, ಸುರೇಶ್ ಗಂಗಾಧರ್, ನಟೇಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net