ಶಾಲೆಯಲ್ಲಿ ಪಕ್ಷಿ ಸಂಕುಲ ರಕ್ಷಣೆ ಕರ್ತವ್ಯ : ಮಕ್ಕಳಿಗೆ ನಿತ್ಯಾನಂದ ಶೆಟ್ಟಿ ಮಾಹಿತಿ

New Project (7)
Published on

ಬಂಟ್ವಾಳ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ರಕ್ಷಣೆಗಾಗಿ ಶಾಲೆಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ ನಿತ್ಯಾನಂದ ಶೆಟ್ಟಿ ಬದ್ಯಾರು ಮತ್ತು ರಮ್ಯಾ ನಿತ್ಯಾನಂದ ಶೆಟ್ಟಿಯವರ ಗುಬ್ಬಚ್ಚಿಗೂಡು ಅಭಿಯಾನದಂಗವಾಗಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಅಭಿಯಾನದ ರೂವಾರಿ ಬಂಟ್ವಾಳ ತಾಲೂಕಿನ ವಾಮದಪದವಿನ ಎಲಿಯನಡುಗೋಡು ಗ್ರಾಮದ ಬದ್ಯಾರಿನ ನಿತ್ಯಾನಂದ ಶೆಟ್ಟಿ ಪಕ್ಷಿಗಳ ಪರಿಚಯವನ್ನು ಮಾಡಿ, ಈ ಶಾಲೆ ಸೇರಿ 313ನೇ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ನಮ್ಮಂತೆ ಅವುಗಳೂ ಎಂಬ ಭಾವವನ್ನು ಬೆಳೆಸಿಕೊಂಡು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದರು. ಅಭಿಯಾನದ ಸಂಚಾಲಕಿ ರಮ್ಯಾ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ಮೂಲಕ ಪಕ್ಷಿಗಳಿಗೆ ನೀರಿಡುವ ಕ್ರಮದ ಕುರಿತು ಮಾಹಿತಿ ನೀಡಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ, ಸುಡುಬೇಸಗೆಯ ಸಂದರ್ಭ ನೀರಿನ ಮಹತ್ವವನ್ನು ಅರಿತು, ಪಕ್ಷಿಗಳಿಗೂ ಅದರ ಅವಶ್ಯಕತೆ ಇರುವುದನ್ನು ಮನಗಾಣಬೇಕು ಎಂದರು. ಹಿರಿಯ ಶಿಕ್ಷಕಿ ತಾಹಿರಾ ವಂದಿಸಿದರು. ಮುಖ್ಯಶಿಕ್ಷಕಿ ಲಕ್ಷ್ಮೀ ಕೆ. ಶಿಕ್ಷಕಿಯರಾದ ಲಾವಣ್ಯ, ಪೂರ್ಣಿಮಾ, ಶಿವಮೂರ್ತಿ ಮತ್ತು ದಿವ್ಯಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net