

ಮೂಡುಬಿದಿರೆ: ಕಲಾ ವಿಭಾಗದ ವಿದ್ಯಾರ್ಥಿಗಳು ಸಾಹಿತ್ಯ, ಇತಿಹಾಸ, ಭೂಗೋಳ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಇನ್ನಿತರ ವಿಷಯಗಳನ್ನು ಕಲಿಯುವುದರ ಜತೆಗೆ ಮಾನವೀಯ ಮೌಲ್ಯ, ವಿಶ್ಲೇಷಣಾ ದೃಷ್ಟಿಕೋನ ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸಿಕೊಂಡಿರುತ್ತಾರೆ. ಹೀಗಾಗಿ ಈ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಅಗತ್ಯ ಜ್ಞಾನ ವಿದ್ಯಾಭ್ಯಾಸದ ಹಂತದಲ್ಲೇ ಪಡೆಯುತ್ತಾರೆ ಎಂದು ಆಳ್ವಾಸ್ ಪದವಿ ಕಾಲೇಜಿನ ಹಳೇ ವಿದ್ಯಾರ್ಥಿನಿ, ನಿಯೋಜಿತ ವಾಣಿಜ್ಯ ತೆರಿಗೆ ನಿರೀಕ್ಷಕಿ ಸಮ್ರೀನ್ ತಯ್ಯಬಾ ಎಂ.ಎಸ್. ಹೇಳಿದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಾ, ಸಾಹಿತ್ಯ ಹಾಗೂ ಮತದಾರರ ಸಾಕ್ಷರತಾ ಸಂಘದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಕಲಾ ಸಂಘದ ಸಂಯೋಜಕ ದಾಮೋದರ ಇದ್ದರು. ಆರ‌್ಯನ್ ಡಿಸೋಜ ನಿರೂಪಿಸಿದರು. ಭಾಗಮ್ಮ ಸ್ವಾಗತಿಸಿದರು. ನಿಧಿ ಅತಿಥಿಯನ್ನು ಪರಿಚಯಿಸಿ, ಲ್ಯಾನ್ಲೇಪಾ ವಂದಿಸಿದರು.