

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಸಿಎ ಕೋರ್ಸ್ ಮಾಹಿತಿ ಕಾರ್ಯಕ್ರಮವನ್ನು ಉಜಿರೆ ಎಸ್ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಉದ್ಘಾಟಿಸಿದರು.
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮಂಗಳೂರು ವಿಭಾಗದ ಸಿಎ ಗೌತಮ್, ಸಿಎ ನಂದನ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಸಿಎ ಕೋರ್ಸ್ನ ಮಹತ್ವ, ಅಧ್ಯಯನ, ಅವಕಾಶಗಳ ಬಗ್ಗೆ ಮಾತನಾಡಿದರು.
ಎಸ್ಡಿಎಂ ಸ್ವಾಯತ್ತ ಪದವಿ ಕಾಲೇಜು ಪ್ರಾಂಶುಪಾಲ ಡಾ.ಬಿ.ಎ.ಕುಮಾರ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.
ಎಸ್ಡಿಎಂ ಪಪೂ ಕಾಲೇಜು ಪ್ರಾಚಾರ್ಯ ಪ್ರಮೋದ್ ಕುಮಾರ್ ಸ್ವಾಗತಿಸಿದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಸೀಮಾ ನಿರೂಪಿಸಿದರು. ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲ ಮನಮೋಹನ್ ನಾಯ್ಕ ವಂದಿಸಿದರು.