

ಮೂಡುಬಿದಿರೆ: ಇಂದಿನ ಶಿಕ್ಷಣದಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಾತ್ರ ಅವಕಾಶಗಳಿವೆ ಎಂಬ ತಪ್ಪು ಕಲ್ಪನೆ ಬೆಳೆಯುತ್ತಿದೆ. ವಿದ್ಯಾರ್ಥಿ ತನ್ನ ಆಸಕ್ತಿ, ಸಾಮರ್ಥ್ಯ ಮತ್ತು ಕನಸುಗಳಿಗೆ ತಕ್ಕಂತೆ ವಿಭಿನ್ನ ವೃತ್ತಿ ಕ್ಷೇತ್ರಗಳನ್ನು ಆರಿಸಿಕೊಳ್ಳಬಹುದು ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಸಕ್ಷಮ್ ಜೈನ್ ಹೇಳಿದರು.
ಆಳ್ವಾಸ್ ಪದವಿಪೂರ್ವ ಕಾಲೇಜು ಆಯೋಜಿಸಿದ್ದ ರಾಷ್ಟ್ರೀಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಬೆಂಗಳೂರಿನ ಭಾರತೀಯ ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಕಾವ್ಯಾ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಉಪಪ್ರಾಂಶುಪಾಲೆ ಜಾನ್ಸಿ ಪಿ.ಎನ್, ಕಾರ್ಯಕ್ರಮ ಸಂಯೋಜಕಿ ರಮ್ಯಾ ರೈ ಇದ್ದರು. ಆಯನಾ ವಿ.ರಮಣ್ ನಿರೂಪಿಸಿದರು. ಸುಪ್ರೀತ್ ವಂದಿಸಿದರು.