ಗುರಿ, ಉದ್ದೇಶದಿಂದ ಸಾಧನೆ ಸಾಧ್ಯ

workshop
ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು
Published on

ಗಂಗೊಳ್ಳಿ: ಸಂತೋಷದಿಂದ ಕಲಿತದದ್ದು ಮರೆಯಲು ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಸೂಕ್ತ ಗುರಿ ಉದ್ದೇಶವನಿಟ್ಟು ಕಲಿತಾಗ ಉತ್ತಮ ಸಾಧನೆ ಸಾಧ್ಯ ಎಂದು ಉಡುಪಿ ಡಯಟ್ ಉಪಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಹೇಳಿದರು.

ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಕುರಿತಾದ ಮಾಹಿತಿ ಕಾರ್ಯಗಾರದಲ್ಲಿ ಮಂಗಳವಾರ ಹದಿಹರೆಯ ಸಮಸ್ಯೆ, ಸಂಪರ್ಕ ಮಾಧ್ಯಮ ಉಪಯೋಗದಿಂದಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
ಹೋಲಿ ರೋಜರಿ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ಪಾವ್ಲ್ ರೆಗೋ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕಿ ತೆರೆಜ್ ಶಾಂತಿ ಎ.ಸಿ. ಸ್ವಾಗತಿಸಿದರು. ಸಹಶಿಕ್ಷಕಿ ಪ್ರತಿಮಾ ಶೆಟ್ಟಿ ವಂದಿಸಿದರು. ಸಹಶಿಕ್ಷಕ ಲೂವಿಸ್ ಪ್ರಶಾಂತ್ ರೆಬೆರೋ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net