

ವಿಜಯವಾಣಿ ಸುದ್ದಿಜಾಲ ಕೋಟ
ಯುವ ಜನಾಂಗ ಕೃಷಿ ಕ್ಷೇತ್ರದ ಕುರಿತು ಆಸಕ್ತಿ ಹೊಂದದಿದ್ದರೆ ಭವಿಷ್ಯದಲ್ಲಿ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಲಿದೆ. ಕೃಷಿ ಕಾಯಕವನ್ನು ತಾತ್ಸಾರ ಮಾಡದೆ ಸ್ವಂತ ಜಮೀನಿನಲ್ಲಿ ಕೆಲಸ ಮಾಡುವಷ್ಟರ ಮಟ್ಟಿಗೆ ಆಸಕ್ತಿ ಮೂಡಿಸಿಕೊಳ್ಳಬೇಕು ಎಂದು ಸ.ಪ.ಪೂ. ಕಾಲೇಜು ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಡೆನ್ನಿಸ್ ಬಾಂಝಾ ಹೇಳಿದರು.
ಮಣೂರಿನಲ್ಲಿ ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಸ.ಪ.ಪೂ. ಕಾಲೇಜು ಮಣೂರು-ಪಡುಕರೆ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ನಾಟಿ ಕುರಿತು ಮಾಹಿತಿ ಕಾರ್ಯಾಗಾರ ಸಂಭ್ರಮದ ಸಾಗುವಳಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಗದ್ದೆಗಿಳಿದು ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಜನತಾ ಸಂಸ್ಥೆ ಪ್ರಬಂಧಕ ಶ್ರೀನಿವಾಸ್ ಕುಂದರ್, ಪಿಆರ್ಒ ರವಿಕಿರಣ್ ಹಾಗೂ ಜನತಾ ಪರಿವಾರದ ಸದಸ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು.