ಮೂಲಸೌಕರ್ಯ ಕಲ್ಪಿಸಲು ಪ್ರಯತ್ನ

18Rayabag2
Published on

ರಾಯಬಾಗ: ಕ್ಷೇತ್ರದಲ್ಲಿ ಅವಶ್ಯವಿರುವ ಕಡೆಗೆ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಅದರಂತೆ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನರೇಗಾ ಹೊಂದಾಣಿಕೆ ಯೋಜನೆಯಡಿ 16 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿದ ಅಂಗನವಾಡಿ ಕೇಂದ್ರ-1 ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ಅನುದಾನದಲ್ಲಿ ದುರ್ಗಾದೇವಿ ಗುಡಿ ಹತ್ತಿರ ನಿರ್ಮಿಸಿರುವ ಸಮುದಾಯ ಭವನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಸಿಡಿಪಿಒ ಭಾರತಿ ಕಾಂಬಳೆ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೇಮಲಾಪೂರೆ, ಭಾರತಿ ಲೋಹಾರ, ಅಜಿತ್ ಮಾಂಗ, ರಾಮಾ ನೂಲಿ, ಶಿವಗೌಡ ಪಾಟೀಲ, ಅಶೋಕ ಮಾಂಗ, ಸಿದ್ದಪ್ಪ ಮಾಂಗ, ಅಡಿವೆಪ್ಪ ಮಾಂಗ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net