ಮೂಲಸೌಲಭ್ಯ ನೀಡಲು ಬದ್ಧ

mnv meeting
ಮಾನ್ವಿ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷೆ ಲಕ್ಷ್ಮೀ ಡಿ.ವೀರೇಶ ಮಾತನಾಡಿದರು. ವಿಪಕ್ಷ ನಾಯಕ ರಾಜಾ ಮಹೇಂದ್ರ ನಾಯಕ, ಮುಖ್ಯಾಧಿಕಾರಿ ಈರಣ್ಣ ಇದ್ದರು.
Published on

ಮಾನ್ವಿ: ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ಮೂಲಸೌಲಭ್ಯ ಕಲ್ಪಿಸುವುದರ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಡಿ. ವೀರೇಶ ಹೇಳಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಬರುವ ಅಭಿವೃದ್ಧಿ ಹಣ ಮತ್ತು ಪುರಸಭೆಯಿಂದ ಸಂಗ್ರಹವಾಗುವ ಸಂಪನ್ಮೂಲಗಳನ್ನು ಸಂಗ್ರಹಿಸಿಕೊಂಡು ಜನರಿಗೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ವಿರೋಧ ಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ ಮಾತನಾಡಿ, ಪುರಸಭೆ ಅಧಿಕಾರಿಗಳು ಹೆಚ್ಚಿನ ಆದಾಯ ಸಂಗ್ರಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದರೆ. ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ಅನುದಾನ ನಿರೀಕ್ಷಿಸುವಂತಾಗಿದೆ. 27 ವಾರ್ಡ್‌ಗಳಿಗೆ ಶುದ್ಧ ಕುಡಿವ ನೀರು ಪೂರೈಕೆಗೆ ಪ್ರತ್ಯೇಕವಾಗಿ ಕ್ರಿಯಾಯೋಜನೆ ತಯಾರಿಸಬೇಕು ಎಂದು ಸಲಹೆ ನೀಡಿದರು.

ಎಸ್ಸಿ-ಎಸ್ಟಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಬೇಕು. ವೈದ್ಯಕೀಯ ಸಹಾಯಧನ, ನೂತನ ಅಡುಗೆ ಅನಿಲ ಸಂಪರ್ಕ ಕಲ್ಪಿಸಬೇಕು. ನೂತನ ಲೇಔಟ್‌ಗಳಲ್ಲಿ ಉದ್ಯಾನಗಳಿಗೆ ಮೀಸಲಿರಿಸಿರುವ ಸ್ಥಳಗಳನ್ನು ಪುರಸಭೆ ವಶಕ್ಕೆ ಪಡೆದು ಅಭಿವೃದ್ಧಿ ಮಾಡಬೇಕು. ಮುಖ್ಯರಸ್ತೆಗಳಲ್ಲಿ ಹೆಚ್ಚಿರುವ ಬೀದಿನಾಯಿ, ಬಿಡಾಡಿ ದನಗಳನ್ನು ನಿಯಂತ್ರಿಸಬೇಕು ಎಂದರು. ಪುರಸಭೆ ವಿಪಕ್ಷ ನಾಯಕ ಅಧಿಕಾರಿ ಈರಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net