ಗಾಯಗೊಂಡಿದ್ದ ನಿವೃತ್ತ ಕಂಟ್ರೋಲರ್ ಸಾವು

Snd Accident Death
ಜಗನ್ನಾಥ
Published on

ಸಿಂಧನೂರು: ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿ ಶುಕ್ರವಾರ ರಾತ್ರಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಜಗನ್ನಾಥ(65) ಚಿಕಿತ್ಸೆ ಫಲಿಸದೇ ಶನಿವಾರ ರಾಯಚೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಸ್-ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಿವೃತ್ತ ಕಂಟ್ರೋಲರ್ ಜಗನ್ನಾಥ ಚಾಲಕನ ಪಕ್ಕದಲ್ಲಿ ಕುಳಿತಿದ್ದರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ರಾಯಚೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಿಸಲಿಲ್ಲ. ಕಳೆದ ಫೆ.28 ರಂದು ಸೇವೆಯಿಂದ ನಿವೃತ್ತರಾಗಿದ್ದರು. ಮೃತರಿಗೆ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸಿಂಧನೂರು ನಗರದಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net