ಅಪಘಾತದಲ್ಲಿ ಚಾಲಕಿಗೆ ಗಾಯ

02sunti01
Published on

ಸುಂಟಿಕೊಪ್ಪ: ಕೊಡಗರಹಳ್ಳಿ ವ್ಯಾಪ್ತಿಯ ಕೂರ್ಗ್‌ಹಳ್ಳಿ ಬಳಿ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕಿಗೆ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಕಾರು ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಚಾಲಕಿ ಪಾರ್ವತಿ ಎಂಬುವರು ಗಾಯಗೊಂಡಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net