ಅಹಿಂದ ವರ್ಗಕ್ಕೆ ಸರ್ಕಾರದಿಂದ ಅನ್ಯಾಯ: ಪ್ರತಿಭಟನೆಯ ಆಕ್ರೋಶ

IMG-20241213-WA0023.jpg
Published on

ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಳಿದ ವರ್ಗಗಳಿಗೆ ಸವಲತ್ತು ಮತ್ತು ಅನುದಾನ ಒದಗಿಸುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ  ಮೋರ್ಚಾ ಪ್ರತಿಭಟಿಸಿತು.‌
ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಧಿಕ್ಕಾರಗಳನ್ನು ಕೂಗಿದ ಪ್ರತಿಭಟನಾಕಾರರು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಭಾಸ್ಕರ್ ಮೂಲಕ ರಾಜ್ಯ ಪಾಲರಿಗೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿ, ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಅಭಿವೃದ್ಧಿ ಕೆಲಸಗಳು ಮರೀಚಿಕೆಯಾಗಿವೆ ಎಂದು ಮಾಜಿ ಶಾಸಕ ಎಂ.ರಾಜಣ್ಣ ಆರೋಪಿಸಿದರು.‌
ಹಿಂದುಳಿದ ವರ್ಗಗಳ ಇಲಾಖೆ, ನಿಗಮ-ಮಂಡಳಿಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಜ್ಯ  ಕಾಂಗ್ರೆಸ್ ಸರ್ಕಾರವು ತಾರತಮ್ಯ ಧೋರಣೆ ಅನುಸರಿಸುವ ಮೂಲಕ ಅನ್ಯಾಯವೆಸಗುತ್ತಿದೆ. ಗ್ಯಾರಂಟಿ ಯೋಜನೆಗಳ ಭರವಸೆಗಳನ್ನು ಈಡೇರಿಸಲು ಯೋಗ್ಯತೆ ಇಲ್ಲದಿದ್ದಲ್ಲಿ ಏತಕ್ಕೆ ಘೋಷಿಸಬೇಕಾಗಿತ್ತು? ಎಂದು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನೇಯ ಗೌಡ ಪ್ರಶ್ನಿಸಿದರು‌‌ ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ್, ಲಕ್ಷ್ಮೀಪತಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಆರ್ ಆಂಜನಪ್ಪ,  ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದ್ ಗೌಡ, ನಗರ ಮಂಡಲ ಅಧ್ಯಕ್ಷ ನರೇಶ್,  ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್, ಒಬಿಸಿ ಜಿಲ್ಲಾ ಕಾರ್ಯದರ್ಶಿ ಸುಮತಿ, ಮಾಜಿ ಮಂಡಲದ ಅಧ್ಯಕ್ಷರಾದ ಪ್ರತಾಪ್, ಸುರೇಂದ್ರ ಗೌಡ, ಜಿಲ್ಲಾ ಮಾಧ್ಯಮ ಸಂಚಾಲಕ ವಿ.ಮಧುಚಂದ್ರ, ಗೌರಿಬಿದನೂರು ತಾಲೂಕು ಪ್ರಧಾನ ಕಾರ್ಯದರ್ಶಿ ವೇಣು, ಶಿವ ಕುಮಾರ್, ವಾಸು, ನಾಗೇಶ್ ಮತ್ತಿತರರು  ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net