ಮೀಸಲಾತಿ ಹುದ್ದೆಗಳಲ್ಲಿ ಮಾಜಿ ಸೈನಿಕರಿಗೆ ಅನ್ಯಾಯ: ಸೋಮಣ್ಣ

p.somanna
Published on

ಮಡಿಕೇರಿ: ಸೈನಿಕರ ರಕ್ಷಣಾ ವಿಭಾಗ ಇಸಿಎಚ್‌ಎಸ್ ಮತ್ತು ಸಿಎಸ್‌ಡಿ ಕ್ಯಾಂಟಿನ್‌ಗಳಲ್ಲಿರುವ ಖಾಲಿ ಹುದ್ದೆಗಳಿಗೆ ಭರ್ತಿ ಮಾಡುವ ಸಂದರ್ಭ ಮಾಜಿ ಸೈನಿಕರಿಗೆ ಅನ್ಯಾಯವಾಗುತ್ತಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತಿರ.ಪಿ.ಸೋಮಣ್ಣ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸಿಎಚ್‌ಎಸ್ ಮತ್ತು ಸಿಎಸ್‌ಡಿಗಳಲ್ಲಿ ಮಾಜಿ ಸೈನಿಕರಿಗೆ ಶೇ.೭೦ ರಷ್ಟು ಮೀಸಲಾತಿಯಿದೆ. ಆದರೆ, ಮಾಜಿ ಸೈನಿಕರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಇತರರಿಗೆ ಹುದ್ದೆಯನ್ನು ನೀಡಲಾಗುತ್ತಿದೆ. ನಾಮಾಕಾವಸ್ಥೆಗೆ ಸಂದರ್ಶನ ನಡೆಸಲಾಗುತ್ತದೆ. ಆದರೆ, ಹುದ್ದೆ ಮಾತ್ರ ಇತರರಿಗೆ ನೀಡುವ ಮೂಲಕ ಮಾಜಿ ಸೈನಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಮುಂದಿನ ಒಂದು ತಿಂಗಳೊಳಗೆ ಸರಿಪಡಿಸದಿದ್ದಲ್ಲಿ ೧೩ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.


ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುದೀರ್, ಜಿಲ್ಲಾ ಮಹಿಳಾ ಸಂಚಾಲಕಿ ಭವಾನಿ, ಸಂಘಟನಾ ಕಾರ್ಯದರ್ಶಿ ಪಿ.ಎಸ್.ವಾಸು, ಸಂಚಾಲಕರಾದ ಪಿ.ಕೆ.ಕುಟ್ಟಪ್ಪ, ಸಿ.ಜಿ.ತಿಮ್ಮಯ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net