ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ

9KMD-1
Published on

ಕೆ.ಎಂ.ದೊಡ್ಡಿ: ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಒಳಮೀಸಲಾತಿ ಅನುಷ್ಠಾನ ಕುರಿತ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದವರಿಗೆ ಅನ್ಯಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ವರದಿಯನ್ನು ಅನುಷ್ಠಾನಗೊಳಿಸಬಾರದು ಎಂದು ದಲಿತ ಮುಖಂಡ ಕೆ.ಕಬ್ಬಾಳಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಸಮರ್ಪಕ ವರದಿಯನ್ನು ನೀಡಿದ್ದಾರೆ. ಅಲ್ಲದೆ ಜನಸಂಖ್ಯೆ ಅನುಗುಣವಾಗಿ ಬಲಗೈ ಸಮುದಾಯವನ್ನು ಕಡಿಮೆ ತೋರಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವುದೇ ಕಾರಣಕ್ಕೂ ಒಳಮಿಸಲಾತಿ ವರದಿಯನ್ನು ಜಾರಿಗೊಳಿಸಬಾರದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಬಲಗೈ ಸಮುದಾಯದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಅವರನ್ನು ಒಳ ಮೀಸಲಾತಿಯ ಸಮೀಕ್ಷೆಗೆ ಒಳಪಡಿಸಲಾಗಿಲ್ಲ. ಸರಿಯಾದ ದತ್ತಾಂಶವನ್ನು ಪಡೆಯುವಲ್ಲಿ ಆಯೋಗ ವಿಫಲವಾಗಿದೆ. ಇದು ಅವೈಜ್ಞಾನಿಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಕಾಡುಕೊತ್ತನಹಳ್ಳಿ ಮರಿಸ್ವಾಮಿ, ಕರಡಕೆರೆ ಯೋಗೇಶ್, ಹೊನ್ನಲಗೆರೆ ಶಿವಣ್ಣ, ಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net