

ಕಾರ್ಕಳ: ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸುವಲ್ಲಿ ನಾವೀನ್ಯತೆ, ನಾಯಕತ್ವ ಮತ್ತು ತಂಡದ ಕೆಲಸ ಮಹತ್ವ ಬಹಳಷ್ಟು ಇದೆ. ವಿವಿಧ ಸವಾಲುಗಳನ್ನು ಜೀವನದಲ್ಲಿನ ಅವಕಾಶಗಳಾಗಿ ರೂಪಿಸಿಕೊಳ್ಳಬಹುದಾಗಿದೆ. ವಿವಿಧ ಕೌಶಲಗಳನ್ನು ಹೆಚ್ಚಿಸುವುದರೊಂದಿಗೆ ನಾವು ಸಾವಾಜಿಕ ಸಂಪರ್ಕಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ವಿಜೇಶ್ ಕಾಮತ್ ಹೇಳಿದರು.
ನಿಟ್ಟೆಯ ಎನ್‌ಎಂಎಎಂಐಟಿಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಶನಿವಾರ ಜರುಗಿದ 2025-26ನೇ ಸಾಲಿನ ಬ್ರಾಂಚ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನಾ ಸವಾರಂಭದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳುಣ್ಕರ್ ವಾತನಾಡಿ, ಇಂದಿನ ಕ್ರಿಯಾತ್ಮಕ ಜಗತ್ತಿನಲ್ಲಿ ನಿರಂತರ ಕಲಿಕೆ ಮತ್ತು ಕೌಶಲ ಅಭಿವೃದ್ಧಿಯ ಅಗತ್ಯ ಹೆಚ್ಚುತ್ತಿದೆ ಎಂದರು.
15 ವಿಭಾಗಗಳ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಬ್ಯಾಡ್ಜ್ ವಿತರಿಸಲಾಯಿತು. ಸ್ಟೂಡೆಂಟ್ ವೆಲ್ಫೇರ್ ವಿಭಾಗದ ಡೀನ್ ಡಾ.ನರಸಿಂಹ ಕೆ.ಬೈಲ್ಕೇರಿ ನೂತನ ವಿದ್ಯಾರ್ಥಿ ನಾಯಕರಿಗೆ ಪ್ರವಾಣವಚನ ಬೋಧಿಸಿದರು.
ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್‌ಎಂಎಎಂಐಟಿ ಉಪಪ್ರಾಂಶುಪಾಲ ಡಾ.ನಾಗೇಶ್ ಪ್ರಭು ಸ್ವಾಗತಿಸಿ, ವಿದ್ಯಾರ್ಥಿನಿ ಐಶ್ವರ್ಯಾ ಪರಿಚಯಿಸಿದರು. ವಿದ್ಯಾರ್ಥಿಗಳಾದ ಮಯೂರ್ ಪಿ. ಮತ್ತು ಶರಣ್ಯಾ ಗಣೇಶ್ ಹೆಗ್ಡೆ ನಿರೂಪಿಸಿದರು.