ಫೋರ್ ವೀಲ್ ರ್ಯಾಲಿ ವಿರುದ್ಧ ತನಿಖೆಗೆ ಆದೇಶ

1 ckm 13
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಫೋರ್ ವೀಲ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜೀಪುಗಳು.
Published on

ಚಿಕ್ಕಮಗಳೂರು: ಕಾಫಿ ನಾಡಿನ ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಬೈರಾಪುರ ಹೊಸಕೆರೆಯಲ್ಲಿ ನಡೆದ ಫೋರ್ ವೀಲ್ ರಾಲಿ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಇತ್ತೀಚಿಗೆ ಆನೆ ಕಾರಿಡಾರ್ ವ್ಯಾಪ್ತಿಯ 9ಗುಡ್ಡಗಳ ವ್ಯಾಪ್ತಿಯಲ್ಲಿ ಫೋರ್ ವೀಲ್ ರ್ಯಾಲಿ ನಡೆದಿತ್ತು. ಈ ರ್ಯಾಲಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಜೀಪುಗಳು ಪಾಲ್ಗೊಂಡಿದ್ದವು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅರಣ್ಯ ಸಚಿವರು ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರುವುದು ಮೋಜು ಮಸ್ತಿಗಲ್ಲ ಎಂದು ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧವೇ ಸಚಿವರು ಕಿಡಿಕಾರಿದ್ದಾರೆ.
ಪಿ ಜಿ ಎಫ್ ದರ್ಜೆಯ ಅಧಿಕಾರಿ ಈ ಕುರಿತು ತನಿಖೆ ನಡೆಸಿ ವರದಿ ನೀಡಬೇಕು. ತಪ್ಪಿತಸ್ಥರ ವಿರುದ್ಧ ಅರಣ್ಯ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net