ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ

Published on

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಹಕ್ಕೋತ್ತಾಯ ಪತ್ರ ಸಲ್ಲಿಸಲಾಯಿತು.

ನಗರದಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ತಾವು ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆ ಪ್ರಾರಂಭಕ್ಕೆ ಸಾಕಷ್ಟು ಒತ್ತಡವನ್ನು ಹಾಕಿದ್ದೀರಿ. ಆದರೆ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಮೇಕೆದಾಟು ಯೋಜನೆ ಪ್ರಾರಂಭ ತಾಂತ್ರಿಕ ಸಮಸ್ಯೆ ಎಂಬಂತೆ ಉಳಿದಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಸಂಸದರು ಒಟ್ಟುಗೂಡಿಸಿ ಮೈಸೂರು, ಬೆಂಗಳೂರು ಸೇರಿದಂತೆ ಗ್ರಾಮಾಂತರ ಭಾಗಕ್ಕೆ ಕುಡಿಯುವ ನೀರು, ಕೆರೆ ತುಂಬಿಸಿ ಅಂತರ್ಜಲ ವೃದ್ಧಿಗಾಗಿ ಬರಗಾಲ ಸಂದರ್ಭದಲ್ಲಿ ರಾಜ್ಯದ ರೈತರ ಹಿತ ದೃಷ್ಟಿಯಿಂದ ಮೇಕೆದಾಟು ಯೋಜನೆ ಪ್ರಾರಂಭವಾಗುವುದು ಅತ್ಯವಶ್ಯಕವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net