ಮೊಕದ್ದಮೆ ಹಿಂಪಡೆಯಲು ಒತ್ತಾಯ

CAN_7682
Published on

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ ಹಿಂಪಡೆಯಬೇಕೆಂದು ಒತ್ತಾಯಿಸಿ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಪುರಭವನ ಎದುರಿನ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.

ರಾಜಕೀಯ ಒತ್ತಡಕ್ಕೆ ಮಣಿದು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣ ದಾಖಲಿಸಿರುವುದು ಖಂಡನೀಯ. ಜಯಲಕ್ಷ್ಮೀಪುರಂ ಪೊಲೀಸರು ಸಮಗ್ರ ತನಿಖೆ ನಡೆಸದೆ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದ್ದು, ಕೂಡಲೇ ಮೊಕದ್ದಮೆ ಹಿಂಪಡೆಯಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಮಿತಿ ಸದಸ್ಯರಾದ ಗೋಪಾಲಕೃಷ್ಣ, ಕೆ.ಎಸ್.ಶಿವರಾಮು, ಶಬ್ಬೀರ್ ಮುಸ್ತಾಫ, ಟಿ.ಗುರುರಾಜ್ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net