ಕೈ ಟಿಕೆಟ್‌ಗೆ ಕಾಡುಗೊಲ್ಲರ ಒತ್ತಾಯ

DSC_0108-05
Published on

ಚಿತ್ರದುರ್ಗ: ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ತಲಾ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವರಾಜು ಅರಸು ಕಾಲದಿಂದಲೂ ಜಿಲ್ಲೆಯಲ್ಲಿ ಸಮುದಾಯದ ಒಬ್ಬರಿಗೆ ಟಿಕೆಟ್ ನೀಡಲಾಗುತ್ತಿತ್ತು. ಇತ್ತೀಚೆಗೆ ಪ್ರಾತಿನಿಧ್ಯ ನೀಡುತ್ತಿಲ್ಲ. ಆದ್ದರಿಂದ ಹಿಂದಿನಂತೆಯೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಡುಗೊಲ್ಲರು ನಿರ್ಣಾಯಕ ಮತದಾರರಾಗಿದ್ದಾರೆ. ಆದರೂ ಕಳೆದ ಮೂರು ವಿಧಾನಸಭಾ ಚುನಾವಣೆಗಳಿಂದಲೂ ಸಮುದಾಯವನ್ನು ಕಡೆಗಣಿಸಿದೆ. ಇದರಿಂದಾಗಿ 2018ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಸಾಮಾಜಿಕ ನ್ಯಾಯದಡಿ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಕಾಡುಗೊಲ್ಲ ಸಮುದಾಯದ ಮುಖಂಡರಾದ ಕಿರಣ್‌ಕುಮಾರ್, ಶಿವಣ್ಣ, ಪಾಂಡುರಂಗಪ್ಪ, ಮಹಿಬುಲ್ಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net