ಅರ್ಹರಿಗೆ ನೇಮಕಾತಿ ಆದೇಶ ನೀಡಲು ಪಟ್ಟು

ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿ, ಪಶು ವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ನಗರದ ಸ್ವಾತಂತ್ರ$್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Insistence on issuing appointment orders to eligible candidates
ಪಶು ವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆfolder
Published on: 

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿ, ಪಶು ವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಮಿತಿ ಸದಸ್ಯ ಡಾ.ಹನುಮಂತಪ್ಪ ಮಾತನಾಡಿ, ಕರ್ನಾಟಕ ಲೋಕ ಸೇವಾ ಆಯೋಗವು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು, 329 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಆ ಪೈಕಿ 29 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅರ್ಹ ಪಶು ವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ ಷರತ್ತು ಬದ್ಧ ನೇಮಕಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಸಿಐಡಿ, ಇಡಿ, ಸರ್ಕಾರ ಹಾಗೂ ನ್ಯಾಯಾಲಯಗಳ ತನಿಖೆಗೂ ಸಹಕಾರ ನೀಡುತ್ತೇವೆ. ಪ್ರಕರಣಕ್ಕೆ ಸಂಬಂಧವಿಲ್ಲ ಅಭ್ಯರ್ಥಿಗಳಿಗೆ ನೇಮಕಾತಿ ನೀಡುವುದನ್ನು ತಡೆಹಿಡಿಯಬಾರದು. ಎ್​ಎಸ್​ಎಲ್​ ವರದಿಯಲ್ಲಿ ಒಎಂಆರ್​ ಪ್ರತಿಯಲ್ಲಿ ತಿದ್ದುಪಡಿ ಕಂಡು ಬಂದಿಲ್ಲ ಎಂದು ವರದಿಯಾಗಿದೆ. ತನಿಖೆಗೆ ಸಂಬಂಧಿಸಿದ ಅಭ್ಯರ್ಥಿಗಳ ಮತ್ತು ಸಂಬಂಧವಿಲ್ಲ ಅಭ್ಯರ್ಥಿಗಳ ವಿಚಾರಣೆಯೂ ಪ್ರತ್ಯೇಕವಾಗಿ ನಡೆಸಬೇಕು ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net