ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

9 vpt 1
ವೀರ ಮಡಿವಾಳ ಸಂಘದ ವತಿಯಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು. ರಾಜೇಶ್ , ಕೇಶವ ಕುಮಾರ್, ಮಹಾದೇವ್, ವನಿತಾ, ರವಿ ಇದ್ದರು.
Published on

ವಿರಾಜಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವೀರ ಮಡಿವಾಳರ ಸಂಘದ ವತಿಯಿಂದ ಸೋಮವಾರ ವಿರಾಜಪೇಟೆ ಶಾಸಕರೂ ಆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.

ಸಮುದಾಯಕ್ಕೆ ಸಮುದಾಯ ಭವನ ನಿರ್ಮಾಣ ಹಾಗೂ ಮಡಿವಾಳ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಯಿತು. ಮನವಿಯನ್ನು ಸ್ವೀಕರಿಸಿ, ಸಮುದಾಯದ ಪ್ರಮುಖರೊಂದಿಗೆ ಮಾತನಾಡಿದ ಶಾಸಕರು, ಈ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ವೀರ ಮಡಿವಾಳ ಸಂಘದ ಅಧ್ಯಕ್ಷ ಡಿ.ಪಿ.ರಾಜೇಶ್, ಉಪಾಧ್ಯಕ್ಷ ಕೇಶವಕುಮಾರ್, ಪ್ರಧಾನ ಕಾರ್ಯದರ್ಶಿ ಮಹದೇವ್, ಖಜಾಂಚಿ ವನಿತಾ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net