ಖನಿಜ ತುಂಬಿದ ವಾಹನಗಳನ್ನು ನಿತ್ಯ ತಪಾಸಣೆ ಮಾಡಿ

IMG-20240919-WA0107
Published on

ಗುಂಡ್ಲುಪೇಟೆ: ತಾಲೂಕಿನಲ್ಲಿ ಪದೇ ಪದೆ ಅಪಘಾತಕ್ಕೆ ಕಾರಣವಾಗುತ್ತಿರುವ ಅಧಿಕ ಭಾರ ಹಾಗೂ ರಹದಾರಿ ಉಲ್ಲಂಘಿಸಿ ಖನಿಜಗಳನ್ನು ಸಾಗಿಸುವ ವಾಹನಗಳ ತಪಾಸಣೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಸೆ.17ರಂದು ಪಟ್ಟಣದ ಸುಲ್ತಾನ್ ಬತ್ತೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನು ಟಿಪ್ಪರ್‌ಅನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ವ್ಯಕ್ತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದರು.

ಖನಿಜ ತುಂಬಿದ ಟಿಪ್ಪರ್ ಚಾಲಕರ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಆಗಿಂದಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಸಾವು-ನೋವು ಪ್ರಕರಣಗಳು ಠಾಣೆಯಲ್ಲಿ ದಾಖಲಾಗಿರುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆ, ಗಣಿ-ಭೂವಿಜ್ಞಾನ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಯ ಮೇಲೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಭವಿಸಿದಲ್ಲಿ ಸಾರ್ವಜನಿಕರ ಆಕ್ರೋಶ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ.

ಆದ್ದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಖನಿಜ ತುಂಬಿದ ವಾಹನಗಳನ್ನು ತಪಾಸಣೆ ಮಾಡಲು ಪ್ರತಿ ದಿನ ನಿಯೋಜಿಸಿ ಅಧಿಕ ಭಾರ, ಪರವಾನಗಿ ಮತ್ತು ಇನ್ನಿತರ ನಿಯಮಗಳನ್ನು ಉಲ್ಲಂಘಿಸಿ ಖನಿಜಗಳನ್ನು ಸಾಗಿಸುವ ವಾಹನಗಳ ವಿರುದ್ಧ ನಿಯಮಾನುಸಾರವಾಗಿ ಆಗತ್ಯ ಕಾನೂನು ಕ್ರಮ ಕೈಗೊಳ್ಳಲು ಕೋರಿ ಸರ್ಕಲ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ಪತ್ರ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net