ಮೂಲ್ಕಿ ಬಪ್ಪನಾಡು ಚೆಕ್‌ಪೋಸ್ಟ್ ಬಳಿ ತಪಾಸಣೆ: ಪೊಲೀಸರಿಂದ ಬಿಗು ಬಂದೋಬಸ್ತ್

New Project (33)
Published on

ಮೂಲ್ಕಿ: ಬಂಟ್ವಾಳದಲ್ಲಿ ನಡೆದ ಯುವಕನ ಕೊಲೆ ಬಳಿಕ ಅಹಿತಕರ ಘಟನೆಗಳು ನಡೆಯದಂತೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ದ.ಕ. ಜಿಲ್ಲೆಯ ಗಡಿ ಪ್ರದೇಶವಾದ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಚೆಕ್‌ಪೋಸ್ಟ್ ಬಳಿ ಮೂಲ್ಕಿ ಪೊಲೀಸರಿಂದ ವಾಹನಗಳ ತಪಾಸಣೆ ನಡೆಯುತ್ತಿದೆ. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯಕಟ್ಟಿನ ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಹಾಗೂ ಎಸ್‌ಐ ಅನಿತಾ ನೇತೃತ್ವದಲ್ಲಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net