

ಅರಕಲಗೂಡು: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಪ್ರತಿಮೆ ಗೋಪುರದ ಕಾಮಗಾರಿಯನ್ನು ಶಾಸಕ ಎ.ಮಂಜು ಪರಿಶೀಲಿಸಿದರು.
ಪ್ರತಿಮೆ ಗೋಪುರದ ಕಾಮಗಾರಿ ತಾಂತ್ರಿಕ ಕಾರಣಗಳಿಂದಾಗಿ ಅರ್ಧಕ್ಕೆ ನಿಂತಿದೆ. ಇದೀಗ ಉಳಿಕೆ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಮುಂಗಡವಾಗಿ ಅನುದಾನ ನೀಡಲಾಗಿದೆ. ಅನುದಾದ ಕೊರತೆ ಉಂಟಾಗದಂತೆ ನಿಗಾ ವಹಿಸಿ ಏ.14ರೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರತಿಮೆ ಆವರಣದಲ್ಲೇ ಅಂಬೇಡ್ಕರ್ ಜಯಂತಿ ಆಚರಿಸಲಾಗುವುದು ಎಂದು ಮಂಜು ತಿಳಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ್, ತಾಲೂಕು ಕಚೇರಿ ಶಿರಸ್ತೇದಾರ್ ಸಿ.ಸ್ವಾಮಿ, ಸೋಮಶೇಖರ್ ಇದ್ದರು.