

ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದಲ್ಲಿ ಒಂದೇ ನದಿಗೆ 2019 ಹಾಗೂ 2022ರಲ್ಲಿ ಸಣ್ಣ ನೀರಾವರಿ ಇಲಾಖೆ ಅನುದಾನದಲ್ಲಿ ರೂ. 5.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಮ್ ವೈಫಲ್ಯ ಹಿನ್ನೆಲೆಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಂಗಾರು ಆರಂಭಕ್ಕೂ ಮುನ್ನ ವೈಫಲ್ಯವನ್ನು ಸರಿಪಡಿಸಬೇಕು. ಇಂಜಿನಿಯರ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರ ಈ ಕುರಿತು ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.
ಪೊನ್ನಂಪೇಟೆ ತಾಲೂಕು ಬಗರ್‌ಹುಕುಂ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಮ್, ಗ್ರಾ.ಪಂ. ಅಧ್ಯಕ್ಷ ಬುಟ್ಟಿಯಂಡ ನಾಣಯ್ಯ, ಬೊಳ್ಳೇರ ಪೊನ್ನಪ್ಪ, ಅಣ್ಣಳಮಾಡ ಚಿಣ್ಣಪ್ಪ, ಕರ್ತಮಾಡ ಮಿಲನ್, ಕಾಳಿಮಾಡ ರಶಿಕ್, ಕರ್ತಮಾಡ ನಂದ, ಕಳಕಂಡ ಜೀತು ಕುಶಾಲಪ್ಪ ಇತರರು ಇದ್ದರು.