ಕುಡಿಯುವ ನೀರು ಸರಬರಾಜು ವ್ಯವಸ್ಥೆ ಪರಿಶೀಲನೆ

18 Dwd 1
Published on

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನೀರು ಪೂರೈಕೆ ಸಮಸ್ಯೆಯಿಂದ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ವಿಜಯವಾಣಿ' ಪತ್ರಿಕೆನೀರು ಪೂರೈಕೆಯಲ್ಲಿ ನಿರ್ಲಕ್ಷ÷್ಯ' ಎಂಬ ವರದಿ ಪ್ರಕಟಿಸಿತ್ತು. ಎಚ್ಚೆತ್ತ ಅಽಕಾರಿಗಳ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಪರಿಶೀಲನೆ ಮಾಡಿತು.
ಜಿಲ್ಲಾಽಕಾರಿ ದಿವ್ಯ ಪ್ರಭು ಸೂಚನೆ ಮೇರೆಗೆ ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಇಒ ಸುಭಾಸ ಸಂಪಗಾAವಿ, ಗ್ರಾಮೀಣ ಕುಡಿಯುವ ನೀರು ಇಲಾಖೆ, ನರೇಗಾ ಎಡಿ ಮತ್ತು ಸಂಬAಽಸಿದ ಇತರ ಅಽಕಾರಿಗಳ ತಂಡ ಭೇಟಿ ನೀಡಿತ್ತು.
ಅಽಕಾರಿಗಳ ತಂಡ ಗ್ರಾಮದ ಮೇಲ್ಮಟ್ಟದ ಜಲ ಸಂಗ್ರಹಾಗಾರ, ನೆಲಮಟ್ಟದ ಜಲ ಸಂಗ್ರಹಾಗಾರ ಹಾಗೂ ಅಮ್ಮಿನಭಾವಿಯಿಂದ ಕುಡಿಯುವ ನೀರು ಸರಬರಾಜು ಆಗುವ ಪೈಪ್‌ಲೈನ್ ವ್ಯವಸ್ಥೆ ಪರಿಶೀಲಿಸಿತು. ಈ ವೇಳೆ ಗ್ರಾಮಸ್ಥರು ಪ್ರತಿನಿತ್ಯ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿರುವುದನ್ನು ವಿವರಿಸಿದರು. ಜನಸಂಖ್ಯೆ ಹೆಚ್ಚಾಗಿರುವುದರಿಂದ ಇನ್ನೊಂದು ದೊಡ್ಡ ಜಲಸಂಗ್ರಹಾಗಾರ ಕಟ್ಟಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಗ್ರಾಮದಲ್ಲಿ ಸುಮÁರು ೨ ಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯದ ನೆಲಮಟ್ಟದ ಜಲ ಸಂಗ್ರಹಾಗಾರ ನಿರ್ಮಿಸಲು ಜಲ್‌ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಪ್ರಾರಂಭಿಸಲಾಗಿದೆ. ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಽಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಽಕಾರಿಗಳು ಮಾಹಿತಿ ನೀಡಿದರು.
೧೪ ವರ್ಷ ಹಳೆಯದಾದ ಟ್ಯಾಂಕ್‌ನ ಸಾಮರ್ಥ್ಯ ಮತ್ತು ಗುಣಮಟ್ಟವನ್ನು ಮರು ಪರಿಶೀಲನೆ ಮÁಡಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಅಽಕಾರಿಗಳು ತಿಳಿಸಿದರು.
ತಾಲೂಕು ಪಂಚಾಯಿತಿ ಇಒ ಸುಭಾಸ ಸಂಗಾAವಿ, ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಚಂದ್ರಶೇಖರ, ಪಂಚಾ¬ತಿ ಅಭಿವೃದ್ಧಿ ಅಽಕಾರಿ ಬಸವರಾಜ ಮÁದನಬಾವಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net