ಹೋಟೆಲ್‌ಗಳ ಪರಿಶೀಲನೆ

ಹೋಟೆಲ್‌ಗಳ ಪರಿಶೀಲನೆ
Published on

ಅರಕಲಗೂಡು: ತಾಲೂಕಿನಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ.ಪಂ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಸೋಮವಾರ ಪಟ್ಟಣದ ಕೆಲವು ಹೋಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು.

ಪ.ಪಂ ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾವಿ, ಹಿರಿಯ ಆರೋಗ್ಯ ನಿರೀಕ್ಷಕ ಚಂದ್ರೇಗೌಡ, ಜಯರಾಮ್ ವಿವಿಧ ಹೋಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಮಳೆ ಆರಂಭವಾದ ಹಿನ್ನೆಲೆ ಹಲವು ಸಾಂಕ್ರಾಮಿಕ ರೋಗಗಳು ಹರಡಲಿದ್ದು, ಪ್ರಮುಖವಾಗಿ ಡೆಂೆ, ಚಿಕೂನ್‌ಗುನ್ಯಾ ಬಗ್ಗೆ ಎಚ್ಚರವಹಿಸಬೇಕು. ಕೇರಳಾಪುರದ ಬಸವನಹಳ್ಳಿಯಲ್ಲಿ ಕೆಲ ದಿನದ ಹಿಂದೆ ಇಬ್ಬರು ಕರುಳು ಬೇನೆಯಿಂದ ಸಾವನ್ನಪ್ಪಿದ್ದಾರೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯವರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ಲಾಸ್ಟಿಕ್ ಲೋಟ ವಶ: ಕೆಲವು ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಲೋಟಗಳನ್ನು ಉಪಯೋಗಿಸುತ್ತಿರುವುದು ಕಂಡು ಬಂದದ್ದರಿಂದ ಪ್ಲಾಸ್ಟಿಕ್ ಅನ್ನು ಉಪಯೋಗಿಸಬಾರದು ಎಂದು ಎಚ್ಚರಿಕೆ ನೀಡಿ ಲೋಟಗಳನ್ನು ವಶಪಡಿಸಿಕೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net