

ಉಡುಪಿ: ಮಲ್ಪೆ-ಕರಾವಳಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಸುಮಾರು 500 ಮೀ ಅಗಲೀಕರಣ ಪೂರ್ಣಗೊಂಡಿದೆ. 227 ಭೂಸ್ವಾಧಿನ ಪ್ರಕ್ರಿಯೆಯಲ್ಲಿ 133 ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ. 25 ಪ್ರಕರಣಗಳಿಗೆ ಈ ವಾರದ ಶುಕ್ರವಾರದೊಳಗೆ ಪರಿಹಾರ ನೀಡಲಾಗುವುದು. ಸುಮಾರು 40 ಪ್ರಕರಣಗಳು ಮಹಜರು ನಡೆಸಲಾಗಿದ್ದು, ನೋಟಿಸ್ ನೀಡುವ ಪ್ರಕ್ರಿಯೆ ನಡೆಯಲಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿಹೇಳಿದರು.
ಮಲ್ಪೆಯಿಂದ ಕರಾವಳಿ ಬೈಪಾಸ್ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮಾ.4 ರಂದು ಮಲ್ಪೆಯ ಮೊಗವೀರ ಸಭಾಭವನದಿಂದ ಕಲ್ಮಾಡಿವರೆಗೆ ಭೂ ಸ್ವಾಧಿನ ಪ್ರಕ್ರಿಯೆ ಪೂರ್ಣಗೊಂಡ ಕಡೆಗಳಲ್ಲಿ ಕಾಮಗಾರಿಯನ್ನು ಪ್ರಾರಂಭಿಸುವಂತೆ ಗುತ್ತಿಗೆದಾರರು ಹಾಗು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದೇನೆಎಂದರು.
ಹೆಚ್ಚಿನ ಪರಿಹಾರ ನೀಡಲು ಯತ್ನ
ಪ್ರಸ್ತುತ ಈ ಭಾಗದಲ್ಲಿ ಪ್ರತಿ ಸೆಂಟ್ಸ್ಗೆ 7 ರಿಂದ 8 ಲಕ್ಷ ರೂ.ವರೆಗೆ ಬೆಲೆ ಇದೆ. ಸರ್ಕಾರನಿಗದಿ ಪಡಿಸಿದ 1 ಲಕ್ಷ ರೂ.ಪರಿಹಾರಪಡೆದುಕೊಳ್ಳುವ ಬಗ್ಗೆ ಭೂ ಮಾಲಕರು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯವರ ಮೂಲಕ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಿ, ಹೆಚ್ಚಿನ ಪರಿಹಾರ ದೊರಕಿಸಿಕೊಡಲುಪ್ರಯತ್ನಿಸುತ್ತೇವೆ. ಇದಕ್ಕೆ ಶೇ. 99ರಷ್ಟುಭೂ ಮಾಲೀಕರು ಒಪ್ಪಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಉಪವಿಭಾಗಧಿಕಾರಿ ಮಹೇಶ್ಚಂದ್ರ, ರಾಷ್ಟ್ರೀಯ ಹೆದ್ದರಿ ಇಲಾಖೆಯ ಇಂಜಿನಿಯರ್, ಗುತ್ತಿಗೆದಾರರು ಉಪಸ್ಥಿತರಿದ್ದರು.