

ವಿಜಯಪುರ: ನಗರದ ಜಿಲ್ಲಾ ಪಂಚಾಯತ್ ಪ್ರವೇಶ ದ್ವಾರದಿಂದ ಕಚೇರಿಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದವರಿಗೆ ಸೂಚಿಸಿದರು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಾಲಮಂದಿರ, ಗಾಂಧಿಭವನದ ಪಕ್ಕದಲ್ಲಿ ಜಿಲ್ಲಾಡಳಿತ ಕಚೇರಿಗಳ ನಿರ್ಮಾಣಕ್ಕಾಗಿ ನಿಗದಿಪಡಿಸಲಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಪಂ ಸಿಇಒ ರಿಷಿ ಆನಂದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.