ಶೆಟ್ಟರ್ ರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ‌ ಪರಿಶೀಲನೆ

Screenshot_2024-06-21-00-15-50-95.jpg
Published on

ಬೆಳಗಾವಿ: ಇಲ್ಲಿನ ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಕಛೇರಿಗೆ ಸಂಸದ ಜಗದೀಶ ಶೆಟ್ಟರ ಇವರು ಭೇಟಿನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವರವನ್ನು ಹಾಗೂ ಸಧ್ಯದ ಸ್ಥಿತಿಗತಿಯ ಮಾಹಿತಿ ಪಡೆದುಕೊಂಡರು. ಇದಲ್ಲದೇ ಈಗಾಗಲೇ ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿದ್ದು ಮಹಾನಗರ ಪಾಲಿಕೆ‌ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕಾಮಗಾರಿಗಳನ್ನು ಕೂಡಲೇ ಹಸ್ತಾಂತಗೊಳಿಸಬೇಕೆಂದು ನಿರ್ದೇಶನ ನೀಡಿದರು. ಸಭೆಯಲ್ಲಿ‌‌ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಉಪಸ್ಥಿತರಿದ್ದರು. ಇದೇ ವೇಳೆ ಸಂಸದರಿಗೆ ಬೆಳಗಾವಿ ಸ್ಮಾರ್ಟ್ ಸಿಟಿ ವತಿಯಿಂದ ಸನ್ಮಾನಿಸಲಾಯಿತು. ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಸಯೀದಾ ಆಫ್ರೀನ್ ಬಾನು ಬಳ್ಳಾರಿ ಅವರು ಸಂಸದ ಮತ್ತು‌ ಶಾಸಕರನ್ನು ಸ್ವಾಗತಿಸಿದರು. 

ಇದೇ ವೇಳೆ ಸಂಸದರು ಸ್ಮಾರ್ಟ್ ಸಿಟಿ‌ ವತಿಯಿಂದ ಅಭಿವೃದ್ಧಿಪಡಿಸಲಾದ ಡಿಜಿಟಲ್ ಗ್ರಂಥಾಲಯ, ಮಹಾತ್ಮಾ ಫುಲೆ ಉದ್ಯಾನ, ಕಲಾಮಂದಿರ ಮತ್ತು ಸಿ.ಬಿ.ಟಿ ಕಾಮಗಾರಿಗಳಿಗೆ ಭೇಟಿನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net