ಮಲೆ ಮಹದೇಶ್ವರ ವನ್ಯಜೀವಿ ಧಾಮದ ಕಚೇರಿ ಪರಿಶೀಲನೆ

3-KGL-5,,,,
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 37;
Published on

ಕೊಳ್ಳೇಗಾಲ: ಹೊರಗುತ್ತಿಗೆ ವಾಚರ್‌ಗಳಿಗೆ 4 ತಿಂಗಳಿನಿಂದ ವೇತನ ನೀಡದಿರುವ ಸಂಬಂಧ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಗುರುವಾರ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ತಂಡ ಭೇಟಿ ನೀಡಿ ವೇತನ ದಾಖಲೆಗಳನ್ನು ಪರಿಶೀಲಿಸಿದರು.

ಬೆಂಗಳೂರು ಕಾರ್ಮಿಕ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಕೊಳ್ಳೇಗಾಲ ಕಾರ್ಮಿಕ ನಿರೀಕ್ಷಕ ಪ್ರಸಾದ್, ಜಿಲ್ಲಾ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ್, ಎಸ್‌ಡಿಎ ಮಧುಸೂದನ್ ಅವರು ಖುದ್ದು ಭೇಟಿ ನೀಡಿ ಕಚೇರಿಯ ವ್ಯವಸ್ಥಾಪಕರು ಹಾಗೂ ನೌಕರರಿಂದ ವೇತನ ವಿಳಂಬಕ್ಕೆ ಕಾರಣವಾಗಿರುವ ಬಗ್ಗೆ ಮಾಹಿತಿ ಪಡೆದರು. ಕೆಲವು ಹೊರಗುತ್ತಿಗೆ ವಾಚರ್‌ಗಳನ್ನು ಮಾತನಾಡಿಸಿ ಅವರ ಸೇವೆ, ಸಂಬಳದ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಕಾರ್ಮಿಕ ನಿರೀಕ್ಷಕ ಪ್ರಸಾದ್ ಮಾತನಾಡಿ, ಹೊರಗುತ್ತಿಗೆ ವಾಚರ್‌ಗಳಿಗೆ ಸಂಬಳ ಆಗದಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಬೆಂಗಳೂರು ಕಾರ್ಮಿಕ ಇಲಾಖೆ ಆಯುಕ್ತರು ಸೂಚನೆ ನೀಡಿ ದ್ದರು. ಅರಣ್ಯ ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ವಾಚರ್‌ಗಳಿಗೆ ಮೈಸೂರಿನ ರಂಗನಾಥ ಏಜೆನ್ಸಿ ಮೂಲಕ ಸಂಬಳ ನೀಡಲಾಗುತ್ತಿತ್ತು. ವಿಚಾರಣೆಯಲ್ಲಿ ಮಾರ್ಚ್ ಅಂತ್ಯಕ್ಕೆ ಏಜೆನ್ಸಿ ಗುತ್ತಿಗೆ ಅವಧಿ ಮುಗಿದಿದೆ. ಆದ್ದರಿಂದ ಹೊಸ ಟೆಂಡರ್ ಪ್ರಕ್ರಿಯೆ ಮಾಡಲಾಗಿತ್ತು. ತಾಂತ್ರಿಕ ಸಮಸ್ಯೆಯಿಂದ ಟೆಂಡರ್ ಆಗಿರಲಿಲ್ಲ.

ಹಾಗಾಗಿ, ವಾಚರ್‌ಗಳಿಗೆ ಸಂಬಳವಾಗಿರಲಿಲ್ಲ. ಇದೀಗ ಹಿಂದೆ ಗುತ್ತಿಗೆ ಪಡೆದಿದ್ದ ಏಜೆನ್ಸಿಯನ್ನೇ ಮುಂದುವರಿಸಲಾಗಿದೆ. ವಾಚರ್‌ಗಳ ವೇತನ ಪಾವತಿ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲದೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ವಾಚರ್‌ಗಳ ವೇತನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕೆಂದು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಹಾಗೂ ಏಜೆನ್ಸಿಗೆ ನೋಟಿಸ್ ನೀಡಲಾಗಿದೆ ಎಂದರು.

ಈ ಬಗ್ಗೆ ಮಲೆ ಮಹದೇಶ್ವರ ವನ್ಯಧಾಮ ಪ್ರಭಾರ ಡಿಸಿಎಫ್ ಸಂತೋಷ್‌ಕುಮಾರ್ ಪ್ರತಿಕ್ರಿಯಿಸಿ, ವಾಚರ್‌ಗಳ ಸಂಬಳ ಪಾವತಿ ಪ್ರಕ್ರಿಯೆ ಹಂತದಲ್ಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net