ನೆಟ್ಟಣದಲ್ಲಿ ಪೊಲೀಸ್ ಹೊರಠಾಣೆ ಆರಂಭಕ್ಕೆ ಕ್ರಮ : ಗೃಹಸಚಿವ ಡಾ.ಜಿ.ಪರಮೇಶ್ವರ ಭರವಸೆ

New Project (19)
Published on

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣವಿರುವ ನೆಟ್ಟಣದಲ್ಲಿ ಪೊಲೀಸ್ ಹೊರಠಾಣೆ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಶೀಘ್ರವಾಗಿ ಪ್ರಸ್ತಾವನೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮನವಿ ಮೇರೆಗೆ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣವಿರುವ ನೆಟ್ಟಣಕ್ಕೆ ಬುಧವಾರ ಭೇಟಿ ನೀಡಿ ಠಾಣೆಗೆ ಕಾಯ್ದಿರಿಸಿದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

ಗುತ್ತಿಗಾರಿನಲ್ಲಿ ಹೊರಠಾಣೆ ಆರಂಭಕ್ಕೂ ಬೇಡಿಕೆ ಇದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪೂರಕ ಕ್ರಮ ಜರುಗಿಸಲಾಗುವುದು. ನೆಟ್ಟಣ ಮೂಲಕ ಕುಕ್ಕೆಗೆ ಅಧಿಕ ಭಕ್ತರು ಆಗಮಿಸುವ ಕಾರಣ ಇಲ್ಲಿ ಹೊರಠಾಣೆ ಅವಶ್ಯಕತೆ ಇದೆ. ಈ ಬಗ್ಗೆ ಶೀಘ್ರ ಕ್ರಮ ಜರುಗಿಸಲಾಗುವುದು ಎಂದರು.

ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಲೋಲಾಕ್ಷ ಕೈಕಂಬ, ಬಿಳಿನೆಲೆ ಗ್ರಾಪಂ ಅಧ್ಯಕ್ಷೆ ಶಾರದಾ ದಿನೇಶ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಪ್ರಮುಖರಾದ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net