ತಿಮ್ಮಯ್ಯ ಪ್ರತಿಮೆ ಪರಿಶೀಲನೆ

29mdk09
Published on

ಮಡಿಕೇರಿ:

ಹಾನಿಗೊಳಗಾದ ಜನರಲ್ ತಿಮ್ಮಯ್ಯ ಪ್ರತಿಮೆ ದುರಸ್ತಿ ಕಾರ್ಯ ಮೈಸೂರಿನಲ್ಲಿ ನಡೆಯುತ್ತಿದ್ದು, ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಮಡಿಕೇರಿ ಕೊಡವ ಸಮಾಜದ ನಿಯೋಗ ಪರಿಶೀಲನೆ ನಡೆಸಿತು. ಈ ಸಂದರ್ಭ ಮಾತನಾಡಿದ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಪ್ರತಿಮೆಯ ದುರಸ್ತಿ ಕಾರ್ಯ ಅಂತಿಮ ಹಂತದಲ್ಲಿದ್ದು ಜನರಲ್ ತಿಮ್ಮಯ್ಯನವರ ಪ್ರತಿಮೆಯನ್ನು ಪ್ರತಿಷ್ಠಾಪಿಸುವ ಸಂದರ್ಭದಲ್ಲಿ ಮಡಿಕೇರಿ ಕೊಡವ ಸಮಾಜ ಜಿಲ್ಲಾಡಳಿತ ನಗರಸಭೆ, ಶಾಸಕರು ಹಾಗೂ ಇತರೆ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಿ ಪ್ರತಿಮೆಯನ್ನು ಗೌರವಯುತವಾಗಿ ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ನಿರ್ದೇಶಕರಾದ ಕೇಕಡ ವಿಜುದೇವಯ್ಯ, ನಂದಿನೆರವಂಡ ರವಿಬಸಪ್ಪ, ಮಂಡಿರ ಸದಾ ಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ,ಚೊಟ್ಟೆಯಂಡ ಸಂಜು ಕಾವೇರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net